ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕಾಲೇಜುಗಳಲ್ಲಿ ಇದೇ 18ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮೇಯರ್ ಗೌತಮ್ ಕುಮಾರ್ ಮಾಸ್ಕ್ ವಿತರಿಸಿದರು.
ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ಭಾರತ್ ಸ್ಕೌಟ್ಸ್ ಅಂಡ್ ಗೌಡ್ಸ್ ಬಿಬಿಎಂಪಿ ಜಿಲ್ಲಾ ಸಂಸ್ಥೆ ವತಿಯಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಮೇಯರ್ ಸಾಂಕೇತಿಕವಾಗಿ ಕ್ಲೀವ್ ಲ್ಯಾಂಡ್ ಟೌನ್ ವಿದ್ಯಾರ್ಥಿನಿಯರಿಗೆ ಮಾಸ್ಕ್ ಗಳನ್ನು ವಿತರಿಸಿದರು.
ವಿಶೇಷ ಆಯುಕ್ತರು(ಘನತ್ಯಾಜ್ಯ) ರಂದೀಪ್, ಕ್ಲೀವ್ ಲ್ಯಾಂಡ್ ಟೌನ್ ಪದವಿ ಕಾಲೇಜು ಪ್ರಾಂಶುಪಾಲ ಆನಂದ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನೋಡಲ್ ಅಧಿಕಾರಿ ಚೆಲ್ಲಯ್ಯ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.