Please assign a menu to the primary menu location under menu

NEWSನಮ್ಮರಾಜ್ಯ

ವೈದ್ಯಕೀಯ ಸಚಿವ ಸುಧಾಕರ್‌ ತಂದೆಗೂ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರ ತಂದೆಗೆ ಇಂದು ಸಂಜೆ ಬಂದ ಆರೋಗ್ಯ ಇಲಾಖೆಯ ಬುಲೆಟಿನ್‌ನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಜತೆಗೆ ಅವರ ಮನೆಯ ಅಡುಗೆ ಭಟ್ಟನಿಗೂ ಕೊರೊನಾ ಪಾಸಿಟಿವ್‌ ಬಂದಿದ್ದು, ಇಬ್ಬರನ್ನು ನಿಗದಿತ ಕೊರೊನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಮತ್ತೆ ಸಂಜೆ ಸುಧಾಕರ್‌ ಟ್ವೀಟ್‌  ಮಾಡಿದ್ದಾರೆ.

ಇದಕ್ಕೂ ಮುನ್ನಾ ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ 82 ವರ್ಷದ ನನ್ನ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್-19 ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದು ಸಚಿವರು ಬೆಳಗ್ಗೆ  ಟ್ವೀಟ್‌ ಮಾಡಿದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ