NEWSನಮ್ಮರಾಜ್ಯ

ಪಕ್ಷಾಂತರಿಗಳಿಗೆ ಚಾಟಿ ಬೀಸುವ ಕಾಯ್ದೆ ಜಾರಿಯಾಗಲಿ

ವಿಧಾನಸೌಧದಲ್ಲಿ ಆಯೋಜಿಸಿದ್ದ ಸಂಸದೀಯ ಗಣ್ಯರ ಸಭೆಯಲ್ಲಿ ಎಲ್ಲಾ ಪಕ್ಷಗಳ ನಾಯಕರ ಅಭಿಪ್ರಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಧಿಕಾರಿಗಳಿಗೆ ಲಭ್ಯವಿರುವ ಅಧಿಕಾರಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ಗುರುವಾರ ವಿಧಾನಸೌಧದಲ್ಲಿ ಸಂಸದೀಯ ಗಣ್ಯರ ಸಭೆ ನಡೆಯಿತು.

ಈ ಸಭೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದರೆ ಅಂಥ ಶಾಸಕರ ಸ್ಥಾನವನ್ನು ಅನರ್ಹಗೊಳಿಸುವ ಪರಮೋಚ್ಚ ಅಧಿಕಾರ ವಿಧಾನಸಬೆ ಸಭಾಧ್ಯಕ್ಷರಿಗೆ ಇರಬೇಕು. ಅನರ್ಹತೆ ವಿಚಾರದಲ್ಲಿ ನ್ಯಾಯಾಂಗದ ಹಸ್ತಕ್ಷೇಪ ಮಾಡಬಾರದು ಎಂದು ವಿವಿಧ ಪಕ್ಷಗಳ ನಾಯಕರು ಒಕ್ಕೋರಲಿನ ಅಭಿಪ್ರಾಯವನ್ನು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸ್ಪೀಕರ್ ನೇತೃತ್ವದ ಸಮಿತಿಯ ಮುಂದೆ ತಮ್ಮ ಅಭಿಪ್ರಾಯ ತಿಳಿಸಿದ್ದು, ಈ ಕುರಿತು ಇನ್ನು ಮುಂದೆ ಪಕ್ಷಾಂತರಿಗಳಿಗೆ ಬಿಸಿ ಮುಟ್ಟಿಸುವ ಮತ್ತು ಪಕ್ಷದಲ್ಲಿ ಬೆಳೆದು ಬೇರೆ ಪಕ್ಷಕ್ಕೆ ಸುಲಭವಾಗಿ ಹೋಗುವಂತವರಿಗೆ ಕಡಿವಾಣ ಹಾಕಲು  ಕಠಿಣ ನಿಯಮ ಜಾರಿಗೆ ಬರುವುದೇ ಎಂಬುದನ್ನು ಕಾದು ನೋಡಬೇಕಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇನ್ನು ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ  ಕಾಗೇರಿ ಅವರು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಶಾಸಕರನ್ನು ಆ ಸ್ಥಾನದಿಂದ ಅನರ್ಹಗೊಳಿಸುವ ಪರಮೋಚ್ಚ ಅಧಿಕಾರ ವಿಧಾನಸಭೆ ಸಭಾಧ್ಯಕ್ಷರಿಗೆ ಇರಬೇಕು. ಅನರ್ಹತೆ ವಿಚಾರದಲ್ಲಿ ನ್ಯಾಯಾಂಗದ ಹಸ್ತಕ್ಷೇಪ ಮಾಡಬಾರದು. ಶಾಸಕರ ಅನರ್ಹತೆ ಪ್ರಕರಣಗಳ ವಿಚಾರಣೆ ಕಾಲ ಮಿತಿ ನಿಗದಿಯಾಗಬೇಕು. ಆ ಕಾಲಮಿತಿಯೊಳಗೇ ಪ್ರಕರಣ ಮುಕ್ತಾಯಗೊಳಿಸಬೇಕು ಎಂಬ ಅಭಿಪ್ರಾಯ ಎಲ್ಲ ಪಕ್ಷಗಳ ಮುಖಂಡರಿಂದ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ ಮೇ 28ರಂದು ಪಕ್ಷಾಂತರ ನಿಷೇಧ ಕಾಯ್ದೆ ಕುರಿತ ಸಭೆ

ಪಕ್ಷಗಳ ಚುನಾವಣೋತ್ತರ ಮೈತ್ರಿಗೂ ಅವಕಾಶ ನೀಡಬಾರದು. ಪಕ್ಷಾಂತರ ಉದ್ದೇಶದಿಂದ ಅವಧಿಗೂ ಮೊದಲೇ ರಾಜೀನಾಮೆ ನೀಡಿದ ಶಾಸಕರಿಗೆ ಮರು ಚುನಾವಣೆಗೆ ನಿಲ್ಲಲು ಅವಕಾಶ ನೀಡಬಾರದು. ಅನರ್ಹಗೊಂಡ ಶಾಸಕರ ಕುಟುಂಬವರ್ಗದವರು ಚುನಾವಣೆಗೆ ಸ್ಪರ್ಧಿಸದಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ನಾಯಕರು ತಮ್ಮ ಅಭಿಪ್ರಾಯ ನೀಡಿದ್ದಾರೆಂದು ವಿವರಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ