NEWSರಾಜಕೀಯ

ಹೋಂ ಕ್ವಾರಂಟೈನ್ ಮುಗಿಸಿದ ಸಚಿವ ಸುಧಾಕರ್‌ ಕರ್ತವ್ಯಕ್ಕೆ ಹಾಜರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಂದೆ ಪತ್ನಿ ಹಾಗೂ ಪುತ್ರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಹೋಂ ಕ್ವಾರಂಟೈನ್ ನಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಮಂಗಳವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕೊರೊನಾ ಸಂಬಂಧಿಸಿದ ಸಭೆಗೆ ವಿಧಾನಸೌಧದಲ್ಲಿ ಇಂದು ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪತ್ನಿ, ಪುತ್ರಿಗೆ ಕೊರೊನಾ  ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ನಾನು ಕ್ವಾರಂಟೈನ್‌ನಲ್ಲಿದೆ. ಆ ವೇಳೆ ಎರಡು ಬಾರಿ ಟೆಸ್ಟಿಂಗ್‌ ಮಾಡಿಸಿದ್ದು ನನ್ನ ರಿಪೋರ್ಟ್ ನೆಗೆಟಿವ್ ಬಂತು. ಆದರೂ ಕ್ವಾರಂಟೈನ್‌ ಮುಗಿಸಿದ್ದು ಈಗ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ಎಲ್ಲರ ಆಶೀರ್ವಾದದಿಂದ ನಾನು ಮತ್ತೆ ಬಂದಿದ್ದೇನೆ ಎಂದರು.

8 ದಿನಗಳ ಹಿಂದೆ ಸಚಿವ ಸುಧಾಕರ್ ಕುಟುಂಬದ ಮೂವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದರು. ಈ ವೇಳೆ ಈ ಮೂವರಿಗೂ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿತ್ತು. ಹೀಗಾಗಿ ಸುಧಾಕರ್ 7 ದಿನಗಳ ಕಾಲ ಸದಾಶಿವನಗರದ ತಮ್ಮ ಮನೆಯಲ್ಲೇ ಕ್ವಾರಂಟೈನ್‌ ಆಗಿದ್ದರು.

ಮನೆಯಲ್ಲೇ ಉಳಿದಿದ್ದ ಸಚಿವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಿತ್ಯ ತಮ್ಮ ಇಲಾಖೆಯ ಕಾರ್ಯಗಳ ಬಗ್ಗೆ ಮೇಲುಸ್ತುವಾರಿ ನಡೆಸಿದ್ದರು. ಅಲ್ಲದೆ ಕೊರೊನಾ ತಡೆ ಕುರಿತು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೋಂಕು ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತಿದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ