ರಾಮನಗರ: ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ. ಭೂಗತ ಲೋಕಕ್ಕೆ ವಿದಾಯ ಹೇಳಿದ್ದ ಮುತ್ತಪ್ಪ ರೈ ನಂತರದ ದಿನಗಳಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅದರಂತೆ ಜಯ ಕರ್ನಾಟಕ ಸಂಘಟನೆಯನ್ನು ಸ್ಥಾಪಿಸಿ ಕಾರ್ಯಪ್ರವೃತ್ತರಾಗಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಆದರೆ ಇತ್ತೀಚೆಗೆ ಬಾಧಿಸಿದ ರೋಗದಿಂದ ಬಸವಳಿದಿದ್ದ ಅವರು ಜನವರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿದ್ದರು. ನನ್ನ ಆರೋಗ್ಯದ ಕುರಿತು ಹರಿದಾಡುತ್ತಿರುವ ವಿಷಯಗಳು ಸತ್ಯ, ನನಗೆ ಕ್ಯಾನ್ಸರ್ ಇರುವುದು ನಿಜ. ಮಿರಾಕಲ್ ನಡೆಯುತ್ತಿರುವುದು ನಿಜವಾಗಿದ್ದು, ವಿಲ್ ಪವರ್ ನಿಂದ ಆರೋಗ್ಯವಾಗಿದ್ದೇನೆ. ಅಲ್ಲದೇ ಟಿಕೆಟ್ ಯಾವಾಗಲೋ ಕನ್ಫರ್ಮ್ ಆಗಿದ್ದು, ಓಕೆ ಆದ್ಮೇಲೆ ಫ್ಲೈಟ್ ಹತ್ತಬೇಕು ಅಷ್ಟೇ ಎಂದು ಭಾವನಾತ್ಮಕವಾಗಿ ಹೇಳಿದ್ದರು.
ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್‍ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ರೈ ಕೆಲವು ತಿಂಗಳಿನಿಂದ ಉತ್ತಮ ಆಡಳಿತ ನಡೆಸುತ್ತಿದ್ದರು. ಅದರಲ್ಲೂ ಗ್ರಾಮೀಣ ಭಾಗದ ಕ್ರೀಡಾಪಟುಗಳ ನೆರವಿಗೆ ನಿಲ್ಲುವುದರ ಮೂಲಕ ಉತ್ತಮ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದರು. ಆದರೆ ಬಾಧಿಸಿದ ಅನಾರೋಗ್ಯದಿಂದಾಗಿ ಆ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು ಚಿರನಿದ್ರೆಗೆ ಜಾರಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ವೈದ್ಯರು ವಿಶ್ರಾಂತಿ ಸೂಚಿಸಿದ್ದರಿಂದ ತಾವೇ ಹುಟ್ಟುಹಾಕಿದ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನವನ್ನೂ ತೊರೆದಿದ್ದರು. ಮೂಲತಃ ಪುತ್ತೂರಿನ ಕೆಯ್ಯೂರು ನಿವಾಸಿಯಾಗಿದ್ದ ರೈ ಅವರು ಬೆಂಗಳೂರಿನ ಬಿಡದಿಯಲ್ಲಿ ಜೀವನ ನಡೆಸುತ್ತಿದ್ದರು. ಇಂದು ಮುಂಜಾನೆ 2.10ಕ್ಕೆ ಮೃತಪಟ್ಟಿದ್ದು, ಬೆಂಗಳೂರು ಸಮೀಪದ ಬಿಡದಿಯಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail