NEWSನಮ್ಮರಾಜ್ಯಸಂಸ್ಕೃತಿ

ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ವಿಧಿವಶ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68)  ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ. ಭೂಗತ ಲೋಕಕ್ಕೆ ವಿದಾಯ ಹೇಳಿದ್ದ ಮುತ್ತಪ್ಪ ರೈ ನಂತರದ ದಿನಗಳಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅದರಂತೆ ಜಯ ಕರ್ನಾಟಕ ಸಂಘಟನೆಯನ್ನು ಸ್ಥಾಪಿಸಿ ಕಾರ್ಯಪ್ರವೃತ್ತರಾಗಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಆದರೆ ಇತ್ತೀಚೆಗೆ ಬಾಧಿಸಿದ ರೋಗದಿಂದ ಬಸವಳಿದಿದ್ದ ಅವರು  ಜನವರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿದ್ದರು. ನನ್ನ ಆರೋಗ್ಯದ ಕುರಿತು ಹರಿದಾಡುತ್ತಿರುವ ವಿಷಯಗಳು ಸತ್ಯ, ನನಗೆ ಕ್ಯಾನ್ಸರ್ ಇರುವುದು ನಿಜ. ಮಿರಾಕಲ್ ನಡೆಯುತ್ತಿರುವುದು ನಿಜವಾಗಿದ್ದು, ವಿಲ್ ಪವರ್ ನಿಂದ ಆರೋಗ್ಯವಾಗಿದ್ದೇನೆ. ಅಲ್ಲದೇ ಟಿಕೆಟ್ ಯಾವಾಗಲೋ ಕನ್ಫರ್ಮ್ ಆಗಿದ್ದು, ಓಕೆ ಆದ್ಮೇಲೆ ಫ್ಲೈಟ್ ಹತ್ತಬೇಕು ಅಷ್ಟೇ ಎಂದು ಭಾವನಾತ್ಮಕವಾಗಿ ಹೇಳಿದ್ದರು.

ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್‍ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ  ರೈ ಕೆಲವು ತಿಂಗಳಿನಿಂದ ಉತ್ತಮ ಆಡಳಿತ ನಡೆಸುತ್ತಿದ್ದರು. ಅದರಲ್ಲೂ ಗ್ರಾಮೀಣ ಭಾಗದ ಕ್ರೀಡಾಪಟುಗಳ ನೆರವಿಗೆ ನಿಲ್ಲುವುದರ ಮೂಲಕ ಉತ್ತಮ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದರು. ಆದರೆ ಬಾಧಿಸಿದ ಅನಾರೋಗ್ಯದಿಂದಾಗಿ ಆ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು ಚಿರನಿದ್ರೆಗೆ ಜಾರಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ವೈದ್ಯರು ವಿಶ್ರಾಂತಿ ಸೂಚಿಸಿದ್ದರಿಂದ ತಾವೇ ಹುಟ್ಟುಹಾಕಿದ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನವನ್ನೂ ತೊರೆದಿದ್ದರು.  ಮೂಲತಃ ಪುತ್ತೂರಿನ ಕೆಯ್ಯೂರು ನಿವಾಸಿಯಾಗಿದ್ದ ರೈ ಅವರು ಬೆಂಗಳೂರಿನ ಬಿಡದಿಯಲ್ಲಿ ಜೀವನ ನಡೆಸುತ್ತಿದ್ದರು. ಇಂದು ಮುಂಜಾನೆ 2.10ಕ್ಕೆ ಮೃತಪಟ್ಟಿದ್ದು, ಬೆಂಗಳೂರು ಸಮೀಪದ ಬಿಡದಿಯಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ