NEWSನಮ್ಮರಾಜ್ಯ

ಬಹುತೇಕ ನಾಗರಿಕರಿಂದ ಕರ್ಫ್ಯೂ ಪಾಲನೆ

ಮಾಂಸ ಮಾರಾಟ ಜೋರು l ಮದ್ಯ ಮಾರಾಟಕ್ಕೆ ನಿಷೇಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್ -19 ಸೋಂಕು ಹರಡವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ  ರಾಜ್ಯಾದ್ಯಂತ ಮದ್ಯ ಉತ್ಪಾದನೆ, ಮದ್ಯ ಸಾಗಾಟ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ   1973 ರ ಕಲಂ 144 ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶ  ಹೊರಡಿಸಿದ್ದಾರೆ.

ಶನಿವಾರ ರಾತ್ರಿ 7ಗಂಟೆಯಿಂದ ಸೋಮವಾರ ಬೆಳಗ್ಗೆ 7ಗಂಟೆವರೆಗೆ ರಾಜ್ಯದಲ್ಲಿ ಸಂಪೂರ್ಣ  ನಿಷೇಧಾಜ್ಞೆ ಜಾರಿಯಾಗಿದೆ. ಹೀಗಾಗಿ ರಾಜ್ಯಾದ್ಯಂತ ದ್ವಿಚಕ್ರವಾಹನ ಸವಾರರನ್ನು ಹೊರತು ಪಡಿಸಿ ಎಲ್ಲಾ ರೀತಿಯ ವಾಹನಗಳು ರಸ್ತೆಗಿಳಿದಿಲ್ಲ. ಆದರೆ ಸಾಮಾನ್ಯವಾಗಿ ಎಲ್ಲಾ ಜಿಲ್ಲೆಗಳಲ್ಲೂ ಬೈಕ್‌ಗಳು ವಿರಳವಾಗಿ ಸಂಚರಿಸುತ್ತಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಎಲ್ಲಾ ಜಿಲ್ಲೆಗಳ ಎಲ್ಲಾ ಏರಿಯಾಗಳಲ್ಲೂ ಚಿಕನ್‌, ಮಟನ್‌ ಖರೀದಿಗೆ ಯಾವುದೇ ನಿರ್ಬಂಧವಿಲ್ಲದೆ ಮಾರಾಟಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿರುವುದರಿಂದ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮಾಂಸ ಖರೀದಿಗೆ ಮುಗಿಬಿಳುತ್ತಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 2 ಸಾವಿರ ಗಡಿಯಲ್ಲಿರುವ ಕೊರೊನಾ ಇನ್ನಷ್ಟು ದಾಂಗುಡಿ ಇಡಲು ಕಾಯುತ್ತಿದೆ.  ಆದರೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಈ ರೀತಿ ಒತ್ತೊತ್ತರಿಸಿಕೊಂಡು ನಿಲ್ಲುತ್ತಿರುವುದರಿಂದ  ಸೋಂಕು ಹರಡುವ ಭೀತಿ ಎದುರಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಹೆಚ್ಚಾಗಿ ಬೆಂಗಳೂರಿನಲ್ಲಿ ಕ್ರಿಕೆಟ್‌ ಆಡುತ್ತಿರುವುದು, ಬೈಕ್‌ನಲ್ಲಿ ಓಡಾಡುತ್ತಿರುವುದು ಕೆಲವೆಡೆ ಸಾಮಾನ್ಯವಾಗಿತ್ತು. ನೀವು ಹೊರಬರಬೇಡಿ ಎಂದು ಪೊಲೀಸರು ಎಷ್ಟೇ ಹೇಳುತ್ತಿದ್ದರು ಕೇಳಿಸಿಕೊಳ್ಳದೇ ಈರೀತಿ ಹೊರಬರುತ್ತಿರುವುದರಿಂದ ಕೆಲವೆಡೆ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಇನ್ನು ಮದುವೆ ಸಮಾರಂಭದಲ್ಲಿ ಮಾಸ್ಕ್‌ ಹಾಕಿಕೊಂಡು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವಿವಾಹ ಮಾಡುತ್ತಿರುವುದು ಕಂಡು ಬಂದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply