ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಪುನರಾರಂಭ ವಿಚಾರದಲ್ಲಿ ನಮ್ಮ ಸರ್ಕಾರ ಇನ್ನೂ ಯಾವುದೇ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಮಹಾಮಾರಿಯ ಹಿನ್ನೆಲೆಯಲ್ಲಿ ಮತ್ತು ಲಾಕ್ ಡೌನ್ ಸ್ಥಿತಿ ಸದ್ಯಕ್ಕೆ ಚಾಲನೆಯಲ್ಲಿರುವುದ್ದು, ಈ ಪರಿಸ್ಥಿತಿಯಲ್ಲಿ ರಾಜ್ಯದ ಶಾಲೆಗಳನ್ನು ತರಾತುರಿಯಲ್ಲಿ ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಈ ವಿಚಾರದಲ್ಲಿ ರಾಜ್ಯದಲ್ಲಿನ ಪೋಷಕರು ಅನಗತ್ಯ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಶಾಲೆಗಳ ಪುನರಾರಂಭ ವಿಚಾರವಾಗಿ ವಿವಿಧ ಮಾಧ್ಯಮಗಳಲ್ಲಿ ಬರುತ್ತಿರುವ ಕೆಲ ವರದಿಗಳು ಅಧಿಕೃತವಲ್ಲ ಮತ್ತು ಈ ಕುರಿತಾಗಿ ಶಿಕ್ಷಣ ಇಲಾಖೆಯಾಗಲಿ ಸರ್ಕಾರವಾಗಲಿ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದು ತಮ್ಮ ಅಧಿಕೃತ ಟ್ವಿಟ್ಟರ್ ಅಕೌಂಟ್ ನಿಂದ ಟ್ವೀಟ್ ಮಾಡುವ ಮೂಲಕ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.