NEWSದೇಶ-ವಿದೇಶ

ಪಕ್ಷಾಂತರ ನಿಷೇಧ ಸಂಬಂಧ ತಜ್ಞರಿಂದ ಅಭಿಪ್ರಾಯ ಸಂಗ್ರಹ  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಕ್ಷಾಂತರ ನಿಷೇಧಕ್ಕೆ ಸಂಬಂಧಿಸಿದಂತೆ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ರಚಿಸಲಾಗಿರುವ ನಿಯಮಾವಳಿಗಳಲ್ಲಿನ ಅವಕಾಶಗಳು ಚರ್ಚೆಯ ವಿಷಯವಾಗಿರುವುದರಿಂದ ಆ ಅನುಸೂಚಿ ಹಾಗೂ ನಿಮಮಾವಳಿಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ.

ಲೋಕಸಭಾಧ್ಯಕ್ಷ ಹಾಗೂ ಅಖಿಲ ಭರತ ಪೀಠಾಸೀನಾಧಿಕಾರಿ ಸಮ್ಮೇಳನಾಧ್ಯಕ್ಷ  ಓಂ. ಬಿರ್ಲಾ , ರಾಜಸ್ಥಾನ ವಿಧಾನ ಸಭಾಧ್ಯಕ್ಷ ಡಾ. ಸಿ.ಪಿ.ಜೋಷಿ  ಅಧ್ಯಕ್ಷತೆಯಲ್ಲಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗೆಡೆ ಕಾಗೇರಿ ಹಾಗೂ ಒಡಿಶಾ ವಿಧಾನಸಭೆಯ ಸಭಾಧ್ಯಕ್ಷ ಡಾ. ಸೂಜ್ರ್ಯ ನಾರಾಯಣ ಪಾತ್ರೊ  ಅವರು ಸಮಿತಿಯಲ್ಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಈ ಸಮಿತಿಯು ಪರಿಶೀಲನಾ ಕಾರ್ಯವನ್ನು ಕೈಗೆತ್ತಿಕೊಳ್ಳಲಿರುವುದರಿಂದ ಈ ದಿಸೆಯಲ್ಲಿ ಕಾನೂನು ತಜ್ಞರಿಂದ, ಅಭಿಪ್ರಾಯ ಪಡೆಯುವುದು ಸೂಕ್ತವೆಂದು ಭಾವಿಸಲಾಗಿದೆ. ಈ ದಿಸೆಯಲ್ಲಿ ಅಭಿಪ್ರಾಯವನ್ನು ನೀಡಬೇಕೆಂದು ಇಚ್ಛಿಸುವವರು ತಮ್ಮ ಅಭಿಪ್ರಾಯವನ್ನು  ಎಂ.ಕೆ. ವಿಶಾಲಾಕ್ಷಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ, ಕೊಠಡಿ ಸಂಖ್ಯೆ-121, ಮೊದಲನೆ ಮಹಡಿ, ವಿಧಾನಸೌಧ,ಬೆಂಗಳೂರು-560001.

ಫ್ಯಾಕ್ಸ್: 080-22258301, ಇ-ಮೇಲ್: [email protected] ವಿಳಾಸಕ್ಕೆ ಖುದ್ದಾಗಿ, ಅಂಚೆ ಮೂಲಕ ಅಥವಾ ಇ-ಮೇಲ್ ಮಖಾಂತರವಾಗಲಿ ಜೂನ್ 10, 2020ರ ಸಂಜೆ 5.00 ಗಂಟೆ ಒಳಗಾಗಿ ನೀಡಬಹುದೆಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು