NEWSನಮ್ಮರಾಜ್ಯ

ಬೆಂಗಳೂರಿನಲ್ಲಿ ಪೊಲೀಸ್‌ ಪೇದೆಗೆ ಕೊರೊನಾ ಸೋಂಕು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೊಲೀಸರಿಗೂ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಪೊಲೀಸ್‌ ಸಿಬ್ಬಂದಿ ಒಬ್ಬರಿಗೆ ಸೋಂಕು ತಗುಲಿರುವುದು  ಬಹಳಷ್ಟು ಅತಂಕವನ್ನು ಸೃಷ್ಟಿಸುತ್ತಿದೆ.

ಇಂದು ಒಬ್ಬ ಸಂಚಾರಿ ಪೊಲೀಸ್‌ ಪೇದೆಗೆ ಕೊರೊನಾ ಪಾಸಿಟಿವ್‌ ಬಂದಿದ್ದು, ಇದರಿಂದ ಆತಂಕಗೊಂಡಿರುವ ಪೊಲೀಸ್‌ ಸಿಬ್ಬಂದಿ.  ಜತೆಗೆ ಅವರೊಂದಿಗೆ ಇದ್ದ ಮಹಿಳಾ ಪೊಲೀಸ್‌ ಪೇದೆಗೂ ಸೋಂಕು ತಗುಲಿದೆ ಎಂಬ ಅನುಮಾನ ಕಾಡುತ್ತಿದ್ದು, ಆಕೆಯನ್ನು ಕ್ವಾರಂಟೈನ್‌ ಮಾಡಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇನ್ನು ಫ್ರೇಜರ್‌ಟೌನ್‌ ಪೊಲೀಸ್‌ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲಾಗಿದ್ದು, ಪಕ್ಕದಲ್ಲೇ ಇರುವ ಮತ್ತೊಂದು ಠಾಣೆಯನ್ನು ಸ್ಯಾನಿಟೈಸ್‌ ಮಾಡಿ ಎಲ್ಲಾ ಸಿಬ್ಬಂದಿಯನ್ನು ಕ್ವಾರಂಟೈನ್‌ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ಪಾಸಿಟಿವ್‌ ಬಂದಿರುವ ಪೇದೆ ಎಲ್ಲೆಲ್ಲಿ ಓಡಾಡಿದ್ದಾರೆ. ಅವರ ಜತೆ ಪ್ರಥಮ ಸಂಪರ್ಕದಲ್ಲಿ ಯಾರಾರು ಇದ್ದರು ಎಂಬ ಬಗ್ಗೆ ಆರೋಗ್ಯ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply