NEWSಆರೋಗ್ಯದೇಶ-ವಿದೇಶವಿಜ್ಞಾನಶಿಕ್ಷಣ-

ಧೃತಿಗೆಡದೆ ದೈರ್ಯದಿಂದ ಕೊರೊನಾ ಎದುರಿಸಿ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಬೆಳ್ಳಿಹಬ್ಬ ಉದ್ಘಾಟಿಸಿದ ಪ್ರಧಾನಿ ಮೋದಿ ಕರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 25 ವರ್ಷಗಳಲ್ಲಿ ಬಹಳಷ್ಟು ಸಾಧಿಸಿದ್ದು ಇನ್ನಷ್ಟು ಉತ್ತುಂಗಕ್ಕೆ ಏರಲಿದೆ ಎಂದು ಪ್ರಧಾನಮಂತ್ರಿ  ನರೇಂದ್ರ ಮೋದಿ ಆಶಯವ್ಯಕ್ತೊಡಿಸಿದರು.

ಇಂದು ವಿಶ್ವವಿದ್ಯಾಲಯದ 25ನೇ ಸಂಸ್ಥಾಪನಾ ದಿವಸದ ಅಂಗವಾಗಿ ರಜತ ಮಹೋತ್ಸವ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕೊರೊನಾ ಇಲ್ಲದಿದ್ದರೆ ಇಂದು ನಾನು ಬೆಂಗಳೂರಿಗೆ ಬರುತ್ತಿದೆ. ಆದರೂ ಇಲ್ಲಿಂದಲೇ ವಿವಿ ಕಾರ್ಯಕ್ರಮ ಉದ್ಘಾಟಿಸಿರುವ ಸಂತಸ ತಂದಿದೆ. ಜತೆಗೆ ವಿವಿಯು ಹೊಸ ಆವಿಷ್ಕಾರಕ್ಕೆ ತೆರೆದುಕೊಳ್ಳುತ್ತಿರುವುದು ದೇಶದಲ್ಲೇ ಖುಷಿಯ ವಿಚಾರ ಎಂದು ಹೇಳಿದರು.

ಇನ್ನು ರಾಜ್ಯ ಸರ್ಕಾರ ಕೊರೊನಾ ವಿರುದ್ಧದ ಹೋರಾಟವನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದ ಅವರು ವೈದ್ಯರು ನತ್ತು ನರ್ಸ್‌ಗಳು ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ ಅವರಿಗೆ ಬೇಕಾದ ಸೂಕ್ತ ಭದ್ರತೆ ನತ್ತು ಸುರಕ್ಷತೆಯನ್ನು ಒದಗಿಸಿ ಕೊಡಲು ನಾವು ಬದ್ಧ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಆದರೆ ಅದಕ್ಕೆ ದೃತಿಗೆಡದೆ ಧೈರ್ಯವಾಗಿ ಎದುರಿಸಲು ಎಲ್ಲರೂ ಸಜ್ಜಾಗಬೇಕು. ಆ ನಿಟ್ಟಿನಲ್ಲಿ ಸರ್ಕಾರವೂ ಸದಾ ನಿಮ್ಮೊಂದಿಗಿರುತ್ತದೆ ಎಂದು ಹೇಳಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಇಚ್ಛಿಸಲಾಗಿತ್ತು, ಈಗ ಕಾರ್ಯಕ್ರಮವನ್ನು  ಪ್ರಧಾನಮಂತ್ರಿಯವರೇ ಉದ್ಘಾಟಿಸಿರುವುದು ನಮಗೆಲ್ಲಾ ಅತ್ಯಂತ ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕೊರೊನಾ ವಿರುದ್ಧದ ಸಮರದಲ್ಲಿ ವೈದ್ಯಕೀಯ, ತಂತ್ರಜ್ಞಾನ ಹಾಗೂ ಕೈಗಾರಿಕೋದ್ಯಮಿಗಳ ಸಹಯೋಗದೊಂದಿಗೆ ಕೋವಿಡ್ ವಿರುದ್ಧ ನೂತನ ಆವಿಷ್ಕಾರಗಳನ್ನು ಕೈಗೊಳ್ಳಬೇಕೆಂಬ ಮೋದಿಯವರ ಆಶಯದಂತೆ ನಮ್ಮ ರಾಜ್ಯದ ಪ್ರತಿಷ್ಠಿತ ಸಂಸ್ಥೆಯಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಇಂತಹ ನೂತನ ಪ್ರಯೋಗಗಳನ್ನು ಮಾಡುತ್ತಿದೆ. ಅದರಂತೆ ಐಐಐಟಿ, ಐಐಎಂ, ಎಲ್ಲಾ ವೈದ್ಯಕೀಯ ಕಾಲೇಜಿನ ಪರಿಣಿತ ವೈದ್ಯರುಗಳು ಸೇರಿದಂತೆ ಆಯಾ ರಂಗಗಳಲ್ಲಿನ ಹೆಸರಾಂತ ತಜ್ಞರುಗಳ ಸಹಯೋಗದೊಂದಿಗೆ ನೂತನ ಆವಿಷ್ಕಾರಕ್ಕೆ ಪ್ರಯತ್ನಿಸಲಾಗುತ್ತಿದೆ. RGUHS ಇದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸಿ ಕೊಡಲು ಮುಂದಾಗಿದೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ವಿಶ್ವವಿದ್ಯಾಲಯ ಇಂದುತನ್ನ 25ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದ್ದು, ಇದು ದೇಶದಲ್ಲೇ ಅತ್ಯಂತ ದೊಡ್ಡ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವಾಗಿದೆ. 800 ಸಂಸ್ಥೆಗಳನ್ನೊಳಗೊಂಡ ಈ ವಿಶ್ವವಿದ್ಯಾಲಯದಲ್ಲಿ 2.5 ಲಕ್ಷ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. 23,000 ಬೋಧಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು ಅವರೆಲ್ಲರೂ ಕೊರೊನಾ ವಿರುದ್ಧದ ಸಮರದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದ ಸಚಿವರು, ರಾಜ್ಯದಲ್ಲಿ ಕೊರೊನಾ ಕುರಿತಾದ ಇತ್ತೀಚಿನ ಮಾಹಿತಿ ನೀಡಿದ ಸಚಿವ ಸುಧಾಕರ್ ಅವರು ಕೋವಿಡ್ ವೈರಾಣುವನ್ನು ಹೆಚ್ಚು ವೈಭವೀಕರಿಸಿ, ಜನರಲ್ಲಿ ಭಯ-ಆತಂಕ ಮೂಡಿಸುವ ರೀತಿಯಲ್ಲಿ ಪ್ರತಿಬಿಂಬಿಸಬಾರದೆಂದು ಮಾಧ್ಯಮಗಳಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಕೋವಿಡ್ ವೈರಾಣುವನ್ನು ಸಾಕಷ್ಟು ಮಟ್ಟಿಗೆ ನಿಯಂತ್ರಿಸಲಾಗಿದ್ದು, ಕೊರೊನಾ ಜೊತೆಯಲ್ಲಿ ನಾವು ಜೀವನ ನಡೆಸಬೇಕಾಗಿರುವುದು ಅನಿವಾರ್ಯವಾಗಿದೆ. ಅದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಅದನ್ನು ನಿಗ್ರಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!