ರಮೇಶ್ ಜಾರಕಿಹೊಳಿಗೆ ಬೆಳಗಾವಿ, ಗೋಪಾಲಯ್ಯಗೆ ಹಾಸನ ಜಿಲ್ಲಾ ಉಸ್ತುವಾರಿ
ಮಹೇಶ್ ಕುಮಠಹಳ್ಳಿಗೆ ಕರ್ನಾಟಕ ಕೊಳಗೇರಿ ಜವಾಬ್ದಾರಿ
ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು ಹಾಸನ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಜೆ.ಸಿ.ಮಾಧುಸ್ವಾಮಿ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿಯನ್ನು ಜಗದೀಶ ಶೆಟ್ಟರ್ ಅವರು ಹೊತ್ತಿದ್ದರು. ರಾಜಕೀಯ ದಿಢೀರ್ ಬೆಳವಣಿಗೆಯಲ್ಲಿ ಇಂದು ಕೆ.ಗೋಪಾಲಯ್ಯ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ವಹಿಸಲಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬೆಳಗಾವಿ ಉಸ್ತುವಾರಿ ಸ್ಥಾನಕ್ಕಾಗಿ ಈ ಮೊದಲು ಶಶಿಕಲಾ ಜೊಲ್ಲೆ, ಲಕ್ಷ್ಮಣ್ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಪೈಪೋಟಿ ಉಂಟಾಗಿದ್ದರಿಂದ ಮೂರನೇ ವ್ಯಕ್ತಿಯಾದ ಜಗದೀಶ್ ಶೆಟ್ಟರ್ ಅವರಿಗೆ ನೀಡಿ ಪೈಪೋಟಿ ನಡೆಯದಂತೆ ಮುಖ್ಯಮಂತ್ರಿ ಯಡಿಯೂರಪ್ಪ ತಡೆದಿದ್ದರು. ಇದೀಗ ಅನಿವಾರ್ಯವಾಗಿ ರಮೇಶ್ ಜಾರಕಿಹೊಳಿಗೆ ಬೆಳಗಾವಿ ಉಸ್ತುವಾರಿ ನೀಡಿದ್ದಾರೆ.
ಅದರಂತೆ ಹಾಸನ ಉಸ್ತುವಾರಿಯನ್ನು ಬಿ.ಗೋಪಾಲಯ್ಯ ಅವರಿಗೆ ನೀಡಲಾಗಿದೆ. ಗೋಪಾಲಯ್ಯ ಈ ಹಿಂದೆ ಜೆಡಿಎಸ್‌ನಲ್ಲಿ ಇದ್ದರು. ಹಾಸನ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆ. ಅಲ್ಲಿ ದೇವೇಗೌಡರ ಕುಟುಂಬವನ್ನು ಎದುರಿಸಲು ಗೋಪಾಲಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಲಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಈ ಮಧ್ಯೆ ಶಾಸಕ ಮಹೇಶ್ ಕುಮಠಹಳ್ಳಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸರ್ಕಾರದ ಆದೇಶ ಹೊರಡಿಸಿದೆ.
ಇನ್ನು ಇತ್ತೀಚೆಗೆ ಆರಂಭವಾಗಿರುವ ಬಿಜೆಪಿಯೊಳಗಿ ಬಂಡಾಯವನ್ನು ಶಮನಗೊಳಿಸುವಲ್ಲಿ ಈ ಮೂಲಕ ಹೊಸ ತಂತ್ರವನ್ನು ಸಿಎಂ ಹೆಣೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಗಳವಾರ ನಡೆದ ಈ ದಿಢೀರ್ ಬೆಳವಣಿಗೆಯನ್ನು ಗಮನಿಸಿದರೆ ಉತ್ತರ ಭಾಗದ ಬಿಜೆಪಿ ಶಾಸಕರು ಸಿಎಂ ವಿರುದ್ಧ ಅಸಮಾಧಾನಗೊಂಡು ಪರ್ಯಾಯ ನಾಯಕರನ್ನು ಹುಟ್ಟುಹಾಕಲು ಹೊರಟಿರುವುದಕ್ಕೆ ಕೊಕ್ಕೆ ಹಾಕುವ ಉದ್ದೇಶ ಇದೆಯೇ ಎಂಬುದು ಪಕ್ಷದೊಳಗಿನ ಕುದಿ ಮೌನಕ್ಕೆ ಸಾಕ್ಷಿ ಎಂಬಂತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಏನಾಗುವುದೋ ಎಂಬುದನ್ನು ಕಾದು ನೋಡಬೇಕಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail