NEWSಶಿಕ್ಷಣ-

ವೈದ್ಯಕೀಯ ಬೋಧಕ ಸಿಬ್ಬಂದಿ, ವೈದ್ಯವಿದ್ಯಾರ್ಥಿಗಳಿಗೆ ವೇತನ ಹೆಚ್ಚಳ

ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪರಿಷ್ಕರಣೆ ಪ್ರಸ್ತಾವಕ್ಕೆ ಸರ್ಕಾರ ಸ್ಪಂದನೆ l ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರಿ ವೈದ್ಯಕೀಯ ಬೋಧಕ ಸಿಬ್ಬಂದಿಗೆ 7ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ವೇತನ ಹೆಚ್ಚಳ ಹಾಗೂ ವೈದ್ಯ ವಿದ್ಯಾರ್ಥಿಗಳ ವೇತನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ನೀಡಿದ್ದ ಭರವಸೆಯಂತೆ ವೈದ್ಯ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ  ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪರಿಷ್ಕರಣೆ ಪ್ರಸ್ತಾವಕ್ಕೆ ಕೊನೆಗೂ ಮುಕ್ತಿ ದೊರಕಿದಂತಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಪರಿಷ್ಕೃತಗೊಂಡಿರುವ ಶಿಷ್ಯವೇತನದ ಅನ್ವಯ ಗೃಹ ವೈದ್ಯರಿಗೆ – 30000, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮೊದಲ ವರ್ಷ – 45000, ಎರಡನೇ ವರ್ಷ – 50000, ಮೂರನೇ ವರ್ಷ- 55000 ನಿಗದಿ ಮಾಡಲಾಗಿದೆ. ಸೂಪರ್ ಸ್ಪೆಷಾಲಿಟಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ – 55000, ಎರಡನೇ ವರ್ಷ – 60000, ಮೂರನೇ ವರ್ಷ- 65000, ಸೀನಿಯರ್ ರೆಸಿಡೆಂಟ್ಸ್ (ಕಡ್ಡಾಯ ಸರ್ಕಾರಿ ಸೇವೆ) – 60000 ಮತ್ತು ಫೆಲೋಶಿಫ್ ವಿದ್ಯಾರ್ಥಿಗಳಿಗೆ – 60000 ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.

ಫೆಬ್ರವರಿ 26 ರಂದು “ಕರ್ನಾಟಕ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್’ ಸಂಘಟನೆ ಪ್ರತಿನಿಧಿಗಳ ನಿಯೋಗ ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿತ್ತು. ಮನವಿ ಸ್ವೀಕರಿಸಿದ್ದ ಸಚಿವ ಸುಧಾಕರ್ ಅವರು, “ಮೂರ್ನಾಲ್ಕು ತಿಂಗಳಲ್ಲಿ ಈ ಕುರಿತು ಖಚಿತ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಭರವಸೆ ನೀಡಿದ್ದರು. ಬಳಿಕ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸುವಂತೆ ಸೂಚನೆಯನ್ನೂ ನೀಡಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಆರ್ಥಿಕವಾಗಿ ಸಂಕಷ್ಟ ಸ್ಥಿತಿಯಲ್ಲಿ ಇರುವ ಸಂದರ್ಭದಲ್ಲಿ ಸರ್ಕಾರ ನಮ್ಮ ಮನವಿ ಪುರಸ್ಕರಿಸಿ ಶೇ. 40 ರಷ್ಟು ಹೆಚ್ಚಳ ಮಾಡಿರುವುದು ಸ್ವಾಗತಾರ್ಹ. ಕಳೆದ ಐದು ವರ್ಷಗಳಿಂದ ಸತತ ಮನವಿ ಸಲ್ಲಿಸಿದ್ದರೂ ಪ್ರಯೋಜನ ಆಗಿರಲಿಲ್ಲ ಕರ್ನಾಟಕ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್‌‌ನ ಎಲ್. ದಯಾನಂದ ಸಾಗರ್ ಹೇಳಿದ್ದಾರೆ.

ಕೊರೋನಾ ಸೋಂಕಿತ ಮಾಧ್ಯಮ ಪ್ರತಿನಿಧಿಯೊಬ್ಬರ ಸಂಪರ್ಕದಿಂದ ಕ್ವಾರಂಟೈನ್ ನಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಸಚ್ಚಿದಾನಂದ ಮತ್ತು ಇಲಾಖೆ ನಿರ್ದೇಶಕ ಡಾ. ಗಿರೀಶ್ ಅವರೊಂದಿಗೆ ವಿಡಿಯೋ ಸಂವಾದ ನಡೆಸಿ ಶಿಷ್ಯ ವೇತನ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಿಕೊಡುವಂತೆ ಸಚಿವರು ಸೂಚಿಸಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರನ್ನು ಕ್ವಾರಂಟೈನ್ ಬಳಿಕ ಭೇಟಿ ಮಾಡಿ ಹಣಕಾಸು ಇಲಾಖೆಯ ಸಮ್ಮತಿ ದೊರಕಿಸುವಂತೆ ಸಚಿವರು ಮನವೊಲಿಸಿದ್ದರು.

ಕೋವಿಡ್ ವಿರುದ್ಧ ಸರ್ಕಾರ ನಡೆಸಿರುವ ಹೋರಾಟದಲ್ಲಿ ವೈದ್ಯ ವಿದ್ಯಾರ್ಥಿಗಳ ಕೊಡುಗೆ ಮಹತ್ತರವಾಗಿದೆ. ಅಧಿಸೂಚಿತ ಕೋವಿಡ್ ಆಸ್ಪತ್ರೆಗಳಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರಿಗೆ ಇದೇ ಸಂದರ್ಭದಲ್ಲಿ ಶಿಷ್ಯ ವೇತನ ಪರಿಷ್ಕರಿಸಿದರೆ ಅವರನ್ನು ಪ್ರೋತ್ಸಾಹಿಸಿದಂತಾಗುತ್ತದೆ ಹಾಗೂ ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುವಂತೆ ಅವರನ್ನು ಪ್ರೇರೇಪಿಸಿದಂತಾಗುತ್ತದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಅನೇಕ ಇಲಾಖೆಗಳ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ವೈದ್ಯರು, ಆಶಾ ಕಾರ್ಯಕರ್ತೆಯರು ಮೊದಲ ಸಾಲಿನ ವಾರಿಯರ್ಸ್‌ಗಳಾಗಿದ್ದಾರೆ. ಕಳೆದ ತಿಂಗಳು‌ 2500 ವೈದ್ಯಕೀಯ ಬೋಧಕ ಸಿಬ್ಬಂದಿಗೆ ಏಳನೇ ವೇತನ ಆಯೋಗದ ಶಿಫಾರಸು ಅನ್ವಯಿಸಿರಲಿಲ್ಲ. ಅವರಿಗೆ ಏಳನೇ ವೇತನ ಆಯೋಗದ ಪ್ರಕಾರ ವೇತನ ಹೆಚ್ಚಳ ಆಗಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿತ್ತು. ಆರ್ಥಿಕ ಸಂಕಷ್ಟ ಇದ್ದರೂ ವೈದ್ಯರಿಗೆ ವೇತನ ಹೆಚ್ಚಳ ಮಾಡಲಾಗಿದೆ.
ವೇತನಕ್ಕಾಗಿ 1404 ಕೋಟಿ ರೂ. ಖರ್ಚಾಗುತ್ತದೆ. ವಾರ್ಷಿಕ 137 ಕೋಟಿ ಹೊರೆ ಆದರೂ ವೈದ್ಯರು ಸಂಬಳ ಏರಿಕೆ ಮಾಡಲು ತೀರ್ಮಾನ ಮಾಡಲಾಗಿದೆ. ಕಳೆದ ಐದು ವರ್ಷಗಳಿಂದ ವೇತನ ಪರಿಷ್ಕರಣೆ ಮಾಡಿರಲಿಲ್ಲ. ಹೆಚ್ಚುವರಿಯಾಗಿ ವೇತನ ಪರಿಷ್ಕರಣೆ ಮಾಡಿದರೆ 270 ಕೋಟಿ ಹೆಚ್ಚಾಗುತ್ತದೆ ಎಂದರು.

ಡೆಂಟಲ್ ಕ್ಲಿನಿಕ್ ಗಳನ್ನು ತೆರೆಯಲು ಅವಕಾಶ ಕೊಡಲಾಗಿದೆ. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಸಂಸ್ಥೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ನಿರ್ದಿಷ್ಟ ಸೇವೆಗಳಿಗೆ ಡೆಂಟಿಸ್ಟ್ ಗಳಿಗೆ ಅವಕಾಶ ಕೊಡಲಾಗಿದೆ ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...