NEWSರಾಜಕೀಯಶಿಕ್ಷಣ-

ಎಸ್ಸೆಸ್ಸೆಲ್ಸಿ ಪರೀಕ್ಷೆ: ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕು ಏರಿಕೆಯಾಗುತ್ತಿರುವುದರ ನಡುವೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ನಗರದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನದಿನಕ್ಕೆ ಹೆಚ್ಚಾಗುತ್ತಿದ್ದರೂ ಸಚಿವರು ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುತ್ತಿದ್ದಾರೆ. ಈ ಸಮಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಮಕ್ಕಳ ಜೀವಕ್ಕೆ ಕಂಟಕ ಎಂದು ಆರೋಪಿಸಿ ಶಿಕ್ಷಣ ಸಚಿವರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್  ಮುಖ್ಯಸ್ಥ ಹಾಗೂ ಸಾಮಾಜಿಕ ಕಾರ್ಯಕರ್ತ ಆದರ್ಶ ಅಯ್ಯರ್  ಸಚಿವ ಸುರೇಶ್ ಕುಮಾರ್ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

ಕರ್ನಾಟಕ ಶಿಕ್ಷಣ ಕಾಯ್ದೆ 22ನೇ ಸೆಕ್ಷನ್ ಪ್ರಕಾರ ಇಂಟರ್ನಲ್‌ ಅಸೆಸ್‌ಮೆಂಟ್‌ ಅಂಕಗಳನ್ನು ನೋಡಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಬಹುದು. ಆದರೆ  ಆ ಕಾನೂನನ್ನು ಬದಿಗಿಟ್ಟು ಮಕ್ಕಳ ಬದುಕನ್ನು ಅಪಾಯಕ್ಕೆ ತಳ್ಳಲು ಪರೀಕ್ಷೆಯನ್ನು ಮಾಡೇ ಮಾಡುತ್ತೇವೆ ಎನ್ನುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಇನ್ನೆರಡು ದಿನಗಳಲ್ಲಿ ಪ್ರಕರಣ ದಾಖಲಾಗದೆ ಹೋದರೆ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಅಯ್ಯರ್ ಹೇಳಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು