NEWSನಮ್ಮರಾಜ್ಯಶಿಕ್ಷಣ-

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ಸಿಗೆ ಸಹಕರಿಸಿ

ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರ ಬರೆದ ಸಚಿವ ಸುರೇಶ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಕೊರೊನಾ ಸೊಂಕು ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಈ ಬಾರಿಯ ಸವಾಲಿನಿಂದ ಕೂಡಿದೆ. ಆದರೂ ಜೂನ್‌ 25ರಿಂದ ಆರಂಭವಾಗಲಿರುವ  ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಶಿಕ್ಷಣ ಸಂಸ್ಥೆಗಳಿಗೆ  ಪತ್ರ ಬರೆದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಇದಲ್ಲದೇ ಜೂನ್‌ 18ರಂದು  ಪಿಯುಸಿ ಇಂಗ್ಲಿಷ್ ಪರೀಕ್ಷೆಯೂ ನಡೆಯಲಿದ್ದು, ಸದ್ಯ ಈಗ ಮುಗಿದಿರುವ ಪಿಯುಸಿ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಎಲ್ಲಾ ಉಪ್ಯಾಸಕರು ಹಾಜರಾಗಬೇಕು ಎಂದು ಮತ್ತೊಂದು ಪತ್ರ ಬರೆದಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಎಸ್ಸೆಸ್ಸೆಲ್ಸಿ ಪರೀಕ್ಷೆ ಅತ್ಯಂತ  ಸುರಕ್ಷಿತ ಹಾಗೂ ಮಕ್ಕಳ ಶ್ರೇಯಸ್ಸಿಗೆ ಪೂರಕವಾಗಿ ನಡೆಯಲು ಎಲ್ಲ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಸಾಮರ್ಥ್ಯದ ಓರೆಗಲ್ಲಾಗಿರುವ ಈ ಬಾರಿಯ ಪರೀಕ್ಷೆಯನ್ನು ಸುಗಮವಾಗಿ ನಿರ್ವಹಣೆ ಮಾಡಲು ತಾವು ಸಹಕರಿಸಬೇಕು  ಎಂದು ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳ ನಡುವೆ ವ್ಯಕ್ತಿಗತ ಅಂತರ ಕಾಪಾಡುವುದು ಸೇರಿ ಇಲಾಖೆ ಕೈಗೊಂಡಿರುವ ಉಪಕ್ರಮಗಳನ್ನು ಪಾಲಿಸಿ.  ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್  ಸೇರಿದಂತೆ ಬಹುತೇಕ ಸಂಘ ಸಂಸ್ಥೆಗಳು ಸರ್ಕಾರದ ಜತೆ ಕೈ ಜೋಡಿಸಿವೆ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಪರೀಕ್ಷೆ ವೇಳೆ ಅನಾರೋಗ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಇದರಿಂದ ಇತರೆ ವಿದ್ಯಾರ್ಥಿಗಳ ಹಿತ ರಕ್ಷಣೆ ಸಾಧ್ಯವಾಗಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ  ತಪಾಸಣೆಗಾಗಿ ಸೂಕ್ತ ವ್ಯವಸ್ಥೆ ಮಾಡಬೇಕು. ಪ್ರತಿ ವಿದ್ಯಾರ್ಥಿ ಮತ್ತು ಪೋಷಕರನ್ನು ಭೇಟಿ ಮಾಡಿ ಪರೀಕ್ಷೆ ಕುರಿತು ಆತ್ಮ ವಿಶ್ವಾಸ ತುಂಬಬೇಕು ಎಂದು ಕೋರಿದ್ದಾರೆ.

ಇನ್ನು ಬಾಕಿ ಉಳಿದಿರುವ ಇಂಗ್ಲಿಷ್ ಉತ್ತರ  ಪತ್ರಿಕೆಯ ಮೌಲ್ಯಮಾಪನವನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೇ ನಡೆಸಲಾಗುವುದು. ಹಾಗೆಯೇ ಮೌಲ್ಯಮಾಪಕರ ಹಿತವನ್ನೂ ಕಾಯಲಾಗುವುದು ಎಂದು ಭರವಸೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...