ಜೂನ್ 25 ರಿಂದ ಜುಲೈ 4ರವರೆಗೆ SSLC ಪರೀಕ್ಷೆ
ಜೂನ್ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ l ಸಚಿವ ಸುರೇಶ್ ಕುಮಾರ್ ಹೇಳಿಕೆ
ಬೆಂಗಳೂರು: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ SSLC ಹಾಗೂ ದ್ವಿತೀಯ PUಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ.
ಜೂನ್ 25 ರಿಂದ SSLC ಪರೀಕ್ಷೆ ಆರಂಭವಾಗಿ ಜುಲೈ 4ರವರೆಗೆ 10 ಅಂದರೆ 10 ದಿನಗಳಲ್ಲಿ ಪರೀಕ್ಷೆ ಮುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಹಾಗೆಯೇ ಜೂನ್ 18ಕ್ಕೆ ದ್ವಿತಿಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದು ಇಂದು ನಡೆದ ಸುದ್ದಿಗೋಷ್ಠಿ ಸಚಿವರು ಮಾಹಿತಿ ನೀಡಿದರು.
ಬದಲಾದ ಪರಿಸ್ಥಿತಿಯಲ್ಲಿ ಪರೀಕ್ಷೆಗೆ ಹೆಚ್ಚುವರಿ ಕೊಠಡಿ ಬಳಸಲಾಗುವುದು, ಅಂದರೆ 2,879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿ ಬಳಸುತ್ತಿದ್ದೇವೆ. ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳಲು ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆಯಲಾಗುವುದು. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಟೈಸರ್ ಮಾಡಲಾಗುವುದು ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಮಾಸ್ಕ್‌ಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಿಬ್ಬಂದಿ ವ್ಯವಸ್ಥೆ ಮಾಡಲಿದ್ದಾರೆ. ಇನ್ನು ದೂರದರ್ಶ ನ ಚಂದನ ವಾಹಿನಿ ಮೂಲಕ ಪುನರ್ ಮನನ ಕಾರ್ಯಕ್ರಮ ಮಾಡಲಾಗುತ್ತಿದ್ದು, ಇದು ಈ ತಿಂಗಳ ಕೊನೆಯ ವರೆಗೂ ಇರಲಿದೆ ಎಂದು ತಿಳಿಸಿದರು.
ಈ ವರ್ಷ ಯಾವುದೇ ಶಾಲೆಗಳು ಶುಲ್ಕದಲ್ಲಿ ಹೆಚ್ಚಳ ಮಾಡಬೇಡಿ, ಸಾಧ್ಯವಾದರೆ ಕಡಿಮೆ ಮಾಡಿ ಎಂದು ಸರ್ಕಾರ ಸೂಚಿಸಿದೆ. ಇನ್ನು ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ ಎಂದ ಅವರು, ಈಗಾಗಲೇ ಕಾಲೇಜು ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರ ನಿನ್ನೆಯಷ್ಟೇ ದೇಶಾದ್ಯಂತ ಮೇ 31ರವರೆಗೆ ಲಾಕ್ಡೌನ್ ವಿಸ್ತರಿಸಿದ್ದು, ಯಾವುದೇ ಶಾಲಾ, ಕಾಲೇಜುಗಳನ್ನು ತೆರೆಯದಂತೆ ಆದೇಶ ಹೊರಡಿಸಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಆದೇಶವನ್ನು ರಾಜ್ಯದಲ್ಲಿ ನಾವು ಪಾಲಿಸುತ್ತೇವೆ ಎಂದು ಹೇಳಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail