NEWSನಮ್ಮರಾಜ್ಯಶಿಕ್ಷಣ-

ಕರ್ನಾಟಕದಲ್ಲಿ SSLC ಪರೀಕ್ಷೆ ರದ್ದಾಗುವುದಿಲ್ಲ

ತಮಿಳುನಾಡು, ತೆಲಂಗಾಣದಲ್ಲಿ ಪರೀಕ್ಷೆ ರದ್ದಾದರೂ ನಾವು ನಡೆಸುತ್ತೇವೆ ಎಂದ ಸಚಿವರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡು ಮತ್ತು ತೆಲಂಗಾಣ ಸರ್ಕಾರಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡಿದ್ದು, ಆಂತರಿಕ ಮೌಲ್ಯಮಾಪನದ ಮೂಲಕ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿವೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಮಾಡುವ ಸಾಧ್ಯತೆ ಇದೆಯೇ ಎಂಬುದು ಈಗ ಪ್ರಸ್ತುತ ಚರ್ಚೆಯಾಗಿದೆ.

ಈಗಾಗಲೇ ಪರೀಕ್ಷೆ ದಿನಾಂಕವನ್ನು ಕೂಡ ಘೋಷಣೆಮಾಡಲಾಗಿದೆ. ಹೀಗಾಗಿ  ತಮಿಳುನಾಡು ಹಾದಿಯಲ್ಲೇ ಕರ್ನಾಟಕದಲ್ಲಿ ಪರೀಕ್ಷೆಯನ್ನು ರದ್ದು ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ನಾವು ಯಾವುದೇ ಕಾರಣಕ್ಕೂ ಪರಿಕ್ಷೇ ರದ್ದು ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಆಂತರಿಕ ಮೌಲ್ಯಮಾಪನದ ಮೂಲಕ ಪಾಸ್   ಮಾಡಿ ಮುಂದೆ ಕಳುಹಿಸಲಿದೆಯೇ ಎಂಬ ಗೊಂದಲ ಇತ್ತು ಆದರೆ ಸಚಿವರು ರದ್ದು ಮಾಡುವುದಿಲ್ಲ ಎಂದು ಉಡುಪಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಈ ನಡುವೆ ಪಾಲಕರು ಪರೀಕ್ಷೆ ಬರೆಯುವುದು ಬೇಡ ಎಂದು ಹೇಳುತ್ತಿಲ್ಲ. ಆದರೆ ಇಂದು ಕಾಡುತ್ತಿರುವ ಕೊರೊನಾ ವಿಶ್ವಮಾರಿ ನಡುವೆ ಮಕ್ಕಳು ಪರೀಕ್ಷೆಗೆ ಹಾಜರಾಗಿ ಅನಾಹುತ ಸಂಭವಿಸಿದರೆ ಏನು ಮಾಡುವುದು ಎಂಬ ಗೊಂದಲದಲ್ಲಿ ಇದ್ದಾರೆ.

ಇನ್ನು ಬಹುತೇಕರು ಈಗ ಏನು ಎರಡು ರಾಜ್ಯಗಳು ಪರೀಕ್ಷೆಯನ್ನು ರದ್ದುಮಾಡಿ ಆಂತರಿಕ ಮೌಲ್ಯಮಾಪನದ ಮೂಲಕ ಪಾಸ್‌ ಮಾಡಿದ್ದಾವೋ ಅದನ್ನೇ ಅನುಸರಿಸಿ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಇನ್ನೂ 16ದಿನ ಪರೀಕ್ಷೆಗೆ ಸಮಯವಿದೆ ಹೀಗಾಗಿ ವಿದ್ಯಾರ್ಥಿಗಳು ಓದಿಕೊಳ್ಳುವುದು ಒಳ್ಳೆಯದು, ಮುಂದಿನ ದಿನಗಳಲ್ಲಿ ಯಾವ ರೀತಿ ಆಗುವುದೋ ಯಾರಿಗೂ ಇನ್ನು ಗೊತ್ತಿಲ್ಲ ಎಂಬ ಅಭಿಪ್ರಾಯವನ್ನು ಇನ್ನು ಹಲವು ತಜ್ಞರು ವ್ಯಕ್ತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply