NEWSಶಿಕ್ಷಣ-

ಜೂನ್‌ 25 ರಂದು ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಪರೀಕ್ಷೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜೂನ್ 25 ರಿಂದ ಜುಲೈ 4ರವರೆಗೆ ನಡೆಯಲಿರುವ SSLC ಪರೀಕ್ಷೆಯ  ವೇಳಾಪಟ್ಟಿ ಪ್ರಕಟವಾಗಿದ್ದು, ವಿದ್ಯಾರ್ಥಿಗಳು  ಪೂರ್ಣ ಪ್ರಮಾಣದ ತಯಾರಿಯನ್ನು ಮಾಡಿಕೊಳ್ಳಬೇಕಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರೀಕ್ಷೆ ನಡೆಸಲು ಅನುಮತಿ ನೀಡಿದ್ದಾರೆ. ಒಟ್ಟು 2,879 ಕೇಂದ್ರದಲ್ಲಿನ 43,720 ಕೊಠಡಿಯಲ್ಲಿ SSLC ಪರೀಕ್ಷೆ ನಡೆಸಲಾಗುವುದು ಎಂದು ನಿನ್ನೆ  ಸುದ್ದಿಗೋಷ್ಠಿಯಲ್ಲಿ  ಶಿಕ್ಷಣ ಸಚಿವ ಸುರೇಶ್ ಕುಮಾರ್‌ ತಿಳಿಸಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಜತೆಗೆ ಇನ್ನೊಂದೆರಡು ದಿನದಲ್ಲಿ ಯಾವ ವಿಷಯವನ್ನು ಎಂದು ನಡೆಸಬೇಕು ಎಂಬುದರ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದ್ದರು. ಅರದಂತೆ ಇಂದು ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಯಾವತ್ತು ಯಾವ ವಿಷಯ ಪರೀಕ್ಷೆ ಇದೆ?
ಜೂನ್ 25- ದ್ವಿತೀಯ ಭಾಷೆ(ಇಂಗ್ಲಿಷ್‌, ಕನ್ನಡ), ಜೂನ್ 26- ಕೋರ್ ಸಬ್ಜೆಕ್ಟ್, ಜೂನ್ 27- ಗಣಿತ, ಜೂನ್ 29- ವಿಜ್ಞಾನ, ಜುಲೈ 1- ಸಮಾಜ ವಿಜ್ಞಾನ, ಜುಲೈ 2- ಪ್ರಥಮ ಭಾಷೆ, ಜುಲೈ 3- ತೃತೀಯ ಭಾಷೆ ಪರೀಕ್ಷೆ, ಜುಲೈ 4- ಜೆಟಿಎಸ್ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆ ನಡೆಯಲಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.  ಆರೋಗ್ಯ ಸಮಸ್ಯೆ ಇದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುತ್ತೇವೆ. ಪರೀಕ್ಷೆ ಪ್ರಾರಂಭಕ್ಕೂ ಮುಂಚೆ ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸರ್‌ ಮಾಡಲಾಗುತ್ತದೆ ಎಂದು ಹೇಳಿದ್ದರು.

ಕಂಟೈನ್‌ಮೆಂಟ್‌ ಜೀನ್‌ನಲ್ಲಿ ಪರೀಕ್ಷೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಇಂದಿಗೆ 126 ಕಂಟೈನ್‌ಮೆಂಟ್‌ ವಲಯಗಳಿವೆ.  ಕಂಟೈನ್‌ಮೆಂಟ್‌ ವಲಯದಲ್ಲಿ ಪರೀಕ್ಷೆ ಇಲ್ಲ. ಈ ವಲಯದಲ್ಲಿನ ಕೇಂದ್ರಗಳನ್ನು  ವರ್ಗಾವಣೆ ಮಾಡಿದ್ದೇವೆ. ಪರೀಕ್ಷೆ ಪ್ರಾರಂಭ ಮಾಡೋಕೆ ಮೂರು ದಿನ ಮೊದಲು ಕಂಟೈನ್‌ಮೆಂಟ್‌ ಜೋನ್ ಆದರೂ ಬೇರೆ ಕೇಂದ್ರಕ್ಕೆ ಶಿಫ್ಟ್ ಮಾಡ್ತೀವಿ. ಪರೀಕ್ಷೆ ಬರೆಯೋ ದಿನ ಕಂಟೈನ್‌ಮೆಂಟ್‌ ವಲಯಕ್ಕೆ ಸೇರ್ಪಡೆಯಾದ್ರೂ ಆ ಮಕ್ಕಳಿಗೆ ಬೇರೆ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್