Please assign a menu to the primary menu location under menu

NEWSನಮ್ಮರಾಜ್ಯಶಿಕ್ಷಣ-

ಆನ್‌ಲೈನ್‌ ಶಿಕ್ಷಣ ರದ್ದು, SSLC ಪರೀಕ್ಷೆ ಕಡ್ಡಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಲ್‌ಕೆಜಿ, ಯುಕೆಜಿ ಮತ್ತು ಪ್ರಾಥಮಿಕ ಶಿಕ್ಷಣದವರೆಗೆ ಆನ್‌ಲೈನ್‌ ಶಿಕ್ಷಣ ರದ್ದುಪಡಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಇಂದು ಕರೆದಿದ್ದ ಶಿಕ್ಷಣ ತಜ್ಞರ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೂ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದು ಎಂದರೆ ಪಾಪ ಎನಿಸುತ್ತಿತ್ತು. ಅಲ್ಲದೆ ಆ ಮಕ್ಕಳು ಹೇಗೆ ಕಲಿಯುತ್ತವೆ ಎಂಬುವುದು ಪ್ರಶ್ನೆಯಾಗಿತ್ತು, ಹೀಗಾಗಿ ಇದನ್ನು ರದ್ದು ಪಡಿಸುವಂತೆ ತಜ್ಞರು ಕೈಗೊಂಡ ತೀರ್ಮಾನದಂತೆ ರದ್ದು ಪಡಿಸಲಾಗಿದೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇನ್ನೊಂದು ಮುಖ್ಯವಾದ ವಿಷಯ ಎಂದರೆ ಆನ್‌ಲೈನ್‌ನಲ್ಲಿ ಪಾಠ ಮಾಡುತ್ತೇವೆ ಎಂದು ವಿದ್ಯಾರ್ಥಿಗಳ ಪಾಲಕರಿಂದ ಶುಲ್ಕ ವಸೂಲಿ ಮಾಡಬಾರದು ಎಂಬುದನ್ನು ಎಚ್ಚರಿಕೆಯೊಂದಿಗೆ ಎಲ್ಲಾ ಶಾಲೆಗಳಿಗೂ ಸೂಚನೆ ನೀಡುತ್ತಿದ್ದೇವೆ ಎಂದು ಹೇಳಿದರು.

ಇನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾಡುವುದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಈ ಮೂಲಕ ಪರೀಕ್ಷೆಯನ್ನು ಮಾಡಲೇ ಬೇಕಾಗಿದೆ. ಆದ್ದರಿಂದ ಎಲ್ಲಾ ಮಕ್ಕಳು ಭಯಬಿಟ್ಟು ಓದಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಾರಿಗೆ ವ್ಯವಸ್ಥೆ ಇಲ್ಲ ಎಂಬ ಕಾರಣಕ್ಕೆ ತಪ್ಪಿಸಿಕೊಳ್ಳಬಾರದು ಎಂಬ ಹಿನ್ನೆಲೆಯಲ್ಲಿ ಖಾಸಗಿ ವಾಹನಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಆಯಾಯ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಮಕ್ಕಳ ಮಾಹಿತಿ ಪಡೆದು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇನ್ನು ಪರೀಕ್ಷೆ ವೇಳೆ ವಿದ್ಯಾರ್ಥಿ ಅನಾರೋಗ್ಯದಿಂದ ಬಳಲುತ್ತಿದ್ದರೆ ಅಂಥ ಮಗುವಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸುವ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ. ಜತೆಗೆ ಪರೀಕ್ಷೆಗೆ ಹಾಜರಾಗುವ ಪ್ರತಿ ಮಗುವಿಗೂ ಮೂರು ಮಾಸ್ಕ್‌ ಕೊಡುವ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಶಿಕ್ಷಣ ತಜ್ಞರಾದ ಗುರುರಾಜ ಕರ್ಜಗಿ, ಎಂ. ಕೆ. ಶ್ರೀಧರ್‌ , ಡಾ. ನಿರಂಜನ ಆರಾಧ್ಯ , ಅಜೀಮ್‌ ಪ್ರೇಂಜಿ ವಿವಿಯ ಋಷಿಕೇಶ್‌, ನಿಮ್ಹಾನ್ಸ್‌ ವೈದ್ಯ ಡಾ. ಜಾನ್‌ ವಿಜಯ ಸಾಗರ್‌ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ