ಬೆಂಗಳೂರು: ನೂತನ ಶಿಕ್ಷಕರ ವರ್ಗಾವಣಾ ನಿಯಂತ್ರಣಾ ಕಾಯ್ದೆಯ ನಿಯಮಗಳು ರೂಪುಗೊಳ್ಳುತ್ತಿದ್ದು, ಈ ನಿಯಮಗಳ ಆಧಾರದಲ್ಲಿ ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಬೇಕಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪ್ರಸ್ತುತ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಹಾಗೆಯೇ ಈ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ವರ್ಗಾವಣೆಗೊಳಗಾದ ಮತ್ತು ವರ್ಗಾವಣೆ ಹಿನ್ನೆಲೆಯಲ್ಲಿ ಸೇವೆಯಿಂದ ಬಿಡುಗಡೆ ಹೊಂದದಿರುವ ಶಿಕ್ಷಕರನ್ನುಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೇ ಮುಂದಿನ ಆದೇಶದವರೆಗೆ ಮುಂದುವರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail