CrimeNEWSನಮ್ಮಜಿಲ್ಲೆ

ಲಂಚ ಪಡೆದ ಸಿಸಿಬಿ ಎಸಿಪಿ, ಇನ್ಸ್‌ಪೆಕ್ಟರ್‌ಗಳ ವಿರುದ್ಧ ಮೂರು ಕೇಸು ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಸಿಸಿಬಿ ಘಟಕದ  ಕೆಲ ಪೊಲೀಸ್ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಸಹಾಯದಿಂದ ಕೆಲ ಡಿಸ್ಟ್ರಿಬ್ಯೂಟರ್ಸ್ ರೊಂದಿಗೆ  ಸೇರಿ ತಮ್ಮ ಅಧಿಕಾರ  ದುರುಯೋಗಪಡಿಸಿ ಕೊಂಡು ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅನುಮತಿ ನೀಡಿ ಲಂಚದ ಹಣ ಪಡೆದಿರುವುದು ಇಲಾಖಾ ವಿಚಾರಣೆ ವೇಳೆ  ದೃಢಪಟ್ಟಿದೆ.

ಕೋವಿಡ್-19 ರ ಲಾಕ್‍ಡೌನ್ ಹಾಗೂ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಏಪ್ರಿಲ್  ಮತ್ತು ಮೇ ನಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಆದರೂ ಅದನ್ನು ಧಿಕ್ಕರಿಸಿ  ಸಿಸಿಬಿಯ ಕೆಲ ಪೊಲೀಸರು ಅನುಮತಿ ನೀಡಿದ್ದಕ್ಕೆ ಅವರ ವಿರುದ್ಧ ಕ್ರಮ ಜರುಗಿಸಲು ಉನ್ನತ ಅಧಿಕಾರಿಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.

ಅದೇ ರೀತಿ ಎನ್-95 ನಕಲಿ ಮಾಸ್ಕ್ ಮಾರಾಟ ಜಾಲದ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಗಳಿಗೆ ಸಹಾಯ ಮಾಡುವ ನೆಪದಲ್ಲಿಯೂ ಸಹ ಲಂಚದ ಹಣ ಪಡೆದಿರುವುದು ಇಲಾಖಾ ಪೂರ್ವಾಭಾವಿ ವಿಚಾರಣೆ ವೇಳೆ  ದೃಢಪಟ್ಟಿದೆ.

‌ ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಈ ಪ್ರಕರಣಗಳ ಕುರಿತಂತೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾ ನಿರೀಕ್ಷಕರು ಬರೆದ ಪತ್ರದಂತೆ ತಂಬಾಕು ಉತ್ಪನ್ನಗಳ ಡಿಸ್ಟ್ರಿಬ್ಯೂಟರ್ಸ್ ಅವರಿಂದ ಪಡೆದ ಲಂಚದ ಹಣದ ಕುರಿತು ಮತ್ತು ಎನ್-95 ನಕಲಿ ಮಾಸ್ಕ್ ಮಾರಾಟ ಜಾಲದ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿನ ಖಾಸಗಿ ವ್ಯಕ್ತಿಗಳಿಂದ ಪಡೆದಿರುವ ಲಂಚದ ಹಣದ  ಆರೋಪಗಳ ಕುರಿತು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲು ಆರೋಪಿತ ಅಧಿಕಾರಿಗಳ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ವ್ಯವಹರಿಸಿದ್ದು ಈ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲು ಪೂರ್ವಾನುಮತಿ  ನೀಡಲಾಗಿದೆ.

ಸಿಸಿಬಿ  ಆರ್ಥಿಕ ಅಪರಾಧ ದಳದ ಎಸಿಪಿ ಎಂ.ಪ್ರಭುಶಂಕರ್ ಬೆಂಗಳೂರಿನಲ್ಲಿ ಸಿಗರೇಟ್‍ಗಳನ್ನು ಡಿಸ್ಟ್ರಿಬ್ಯೂಟ್ ಮಾಡುವ ಡಿಸ್ಟ್ರಿಬ್ಯೂಟಿಂಗ್ ಏಜೆನ್ಸಿಯ ಮಾಲೀಕರೊಬ್ಬರಿಂದ ಹಾಗೂ ಇತರೆ ಡಿಸ್ಟ್ರಿಬ್ಯೂಟರ್‍ಗಳ ಪರವಾಗಿ ಲಾಕ್‍ಡೌನ್ ಅವಧಿಯಲ್ಲಿ ನಗರದಾದ್ಯಂತ ಇರುವ ಅಂಗಡಿಗಳಿಗೆ ಹೆಚ್ಚಿನ ಬೆಲೆಗೆ ಸಿಗರೇಟ್‍ಗಳನ್ನು ವಿತರಿಸಿ ಅಕ್ರಮ ಲಾಭ ಮಾಡಿಕೊಳ್ಳಲು ಅನುವು ಮಾಡಿಕೊಟ್ಟು, ಸದರಿಯವರಿಂದ ಮಧ್ಯ ವರ್ತಿಗಳ ಮುಖೇನ ಲಂಚದ ಹಣವನ್ನು ಸ್ವೀಕರಿಸಿದ್ದು, ಈ ಬಗ್ಗೆ ಅರೋಪಿಗಳಾದ   ಎಂ.ಪ್ರಭುಶಂಕರ್,  ಇನ್ಸ್‍ಪೆಕ್ಟರ್‍  ಆರ್.ಎಂ.ಅಜಯ್, ನಿರಂಜನ್‍ ಕುಮಾರ್ ಮತ್ತು ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

‌ ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಎಂ.ಪ್ರಭುಶಂಕರ್  ಬೆಂಗಳೂರಿನ ಹನುಮಂತನಗರದಲ್ಲಿ ಡಿಸ್ಟ್ರಿಬ್ಯೂಟರ್ ಒಬ್ಬರನ್ನು ಸಿಸಿಬಿ ಕಚೇರಿಗೆ ಕರೆಯಿಸಿಕೊಂಡು ಲಾಕ್‍ಡೌನ್ ಅವಧಿಯಲ್ಲಿ ಅಕ್ರಮವಾಗಿ ಸಿಗರೇಟ್ ಮಾರಾಟ ಮಾಡುತ್ತಿರುವ ವಿಚಾರದಲ್ಲಿ ಲಂಚದ ಹಣಕ್ಕಾಗಿ ಒತ್ತಾಯಿಸಿ ಮಧ್ಯವರ್ತಿಯ ಮೂಲಕ ಲಂಚದ ಹಣವನ್ನು ಸ್ವೀಕರಿಸಿದ್ದರು.

ಈ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ, ಬೆಂಗಳೂರು ನಗರ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದ್ದು, ಪ್ರಕರಣದಲ್ಲಿ ಅಧಿಕಾರಿಗಳ ಮತ್ತು ಖಾಸಗಿ ವ್ಯಕ್ತಿಗಳ ಪಾತ್ರದ ಕುರಿತಂತೆ ತನಿಖೆ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

‌ ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು