NEWSನಮ್ಮಜಿಲ್ಲೆರಾಜಕೀಯ

ಬನ್ನೂರು ಪುರಸಭೆ ಅಧ್ಯಕ್ಷರಾಗಿ ಭಾಗ್ಯಶ್ರೀ, ಉಪಾಧ್ಯಕ್ಷರಾಗಿ ಶೋಭಾ ಅವಿರೋಧ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಬನ್ನೂರು ಪುರಸಭೆ ಅಧ್ಯಕ್ಷರಾಗಿ ಭಾಗ್ಯಶ್ರೀ ಕೃಷ್ಣ, ಉಪಾಧ್ಯಕ್ಷರಾಗಿ ಶೋಭಾ ಸತೀಶ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಿ.ನರಸೀಪುರ ತಾಲೂಕು ಬನ್ನೂರು ಪುರಸಭೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಧ್ಯಾಹ್ನ 12ಗಂಟೆಗೆ ನಿಗದಿಯಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಎಸ್‌ಟಿ ಮಹಿಳಾ ಮೀಸಲಾತಿಯಡಿ ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್‌ನ ಭಾಗ್ಯಶ್ರೀ ಕೃಷ್ಣ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಜೆಡಿಎಸ್‌ನ ಶೋಭಾ ಸತೀಶ್‌ ಅವರು ನಾಮಪತ್ರಸಲ್ಲಿಸಿದ್ದು, ಬೇರಾರು ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಹಸೀಲ್ದಾರ್‌ ನಾಗೇಶ್‌ ಈ ಇಬ್ಬರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಘೋಷಿಸಿದರು.

ಕಳೆದ 2018ರಿಂದ ನೆನಗುದಿಗೆ ಬಿದ್ದಿದ್ದ ಪುರಸಭೆಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿತ್ತು. ಹೀಗಾಗಿ 15ನೇ ವಾರ್ಡ್‌ನ ಕಾಂಗ್ರೆಸ್‌ ಭಾಗ್ಯಶ್ರೀ ಕೃಷ್ಣ ಅಧ್ಯಕ್ಷರಾಗಿ, ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗದ ಮಹಿಳಾ ಮೀಸಲಾತಿ ಇದ್ದರಿಂದ 12 ಜನ ಜೆಡಿಎಸ್‌ ಸದಸ್ಯರ ದೊಡ್ಡ ಪಡೆಯಿರುವ 10ನೇ ವಾರ್ಡ್‌ ಸದಸ್ಯೆ ಶೋಭಾ ಸತೀಶ್‌ ಅವಿರೋಧವಾಗಿ ಆಯ್ಕೆಯಾದರು.

ಬಳಿಕ ಮಾತನಾಡಿದ ನೂತನ ಅಧ್ಯಕ್ಷೆ ಭಾಗ್ಯಶ್ರೀ ಕೃಷ್ಣ, ನಮ್ಮ ಪಕ್ಷದ ಹಿರಿಯರು ಮಾಜಿ ಸಚಿವ ಎಚ್‌.ಸಿ. ಮಹದೇವಪ್ಪ ಅವರ ಮಾರ್ಗದರ್ಶನದ ಜತೆಗೆ 12 ಜೆಡಿಎಸ್‌, 7 ಕಾಂಗ್ರೆಸ್‌, ಇಬ್ಬರು ಬಿಜೆಪಿ ಮತ್ತು ಇಬ್ಬರು ಪಕ್ಷೇತರ ಸದಸ್ಯರು ಸೇರಿ ಪುರಸಭೆಯಲ್ಲಿರುವ ಒಟ್ಟು 23 ಸದಸ್ಯರಿದ್ದು. ಇವರೆಲ್ಲರ ವಿಶ್ವಾಸದೊಂದಿಗೆ ಪುರಸಭೆ ವ್ಯಾಪ್ತಿಯಲ್ಲಿ ಬರುವ ಜನರ ಸಮಸ್ಯೆ ನಿವಾರಿಸಿ ಮತ್ತು ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮೂಲಕ ಮಾದರಿ ಪುರಸಭೆ ಮಾಡುವ ಕನಸಿದೆ ಎಂದು ಹೇಳಿದರು.

ಇನ್ನು ನಾನು ಅಧ್ಯಕ್ಷರಾಗಲು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಕಾರಣರಾದ ನಮ್ಮ ಪಕ್ಷದ ಮುಖಂಡರಾದ ಎಚ್‌.ಸಿ. ಮಹದೇವಪ್ಪ, ಸುನೀಲ್‌ ಬೋಸ್‌, ಜಿಪಂ ಸದಸ್ಯ ಮಂಜುನಾಥ್‌, ಮಾಜಿ ಅಧ್ಯಕ್ಷರಾದ ಪದ್ಮನಾಭ್‌, ಮುನವರ್‌ಪಾಷಾ, ರಾಮಲಿಂಗೇಗೌಡ, ಸತೀಶ್‌ ನಾಯಕ ಸೇರಿ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ