NEWSನಮ್ಮರಾಜ್ಯಸಂಸ್ಕೃತಿ

ಬೀದರ್:‌ ನೂತನ ಅನುಭವ ಮಂಟಪಕ್ಕೆ ಸಿಎಂ ಬಿಎಸ್‌ವೈರಿಂದ ಶಂಕುಸ್ಥಾಪನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೀದರ್​​: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಇಂದು ಹಳೆಯ ಅನುಭವ ಮಂಟಪದ ಬಳಿ ಶಂಕುಸ್ಥಾಪನೆ ನೆರೆವೇರಿಸಿದರು.

ಈ ಮೂಲಕ ಕರ್ನಾಟಕ ಜನತೆಯ ಬಹು ವರ್ಷಗಳ ಕನಸು ನನಸಾಗಿದ್ದ, ವಿಶ್ವಗುರು ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಸ್ಥಾಪಿಸಿದ ಅನುಭವ ಮಂಟಪ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಕೊನೆಗೂ ಚಾಲನೆ ಸಿಕ್ಕಂತ್ತಾಗಿದೆ.

500 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಅನುಭವ ಮಂಟಪ ನಿರ್ಮಿಸಲಾಗುತ್ತಿದ್ದು, ಸದ್ಯ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ 350 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಂತಾರಾಷ್ಟ್ರೀಯ ಮಕ್ಕಳ ಉದ್ಯಾನವನ ಸಂಗೀತ ಕಾರಂಜಿ ಹಾಗೂ 403 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಮಂಟಪ ಮತ್ತು ವಾಣಿಜ್ಯ ಸಂಕೀರ್ಣಗಳಿಗೂ ಭೂಮಿ ಪೂಜೆ ಮಾಡಿದರು.

ಬಳಿಕ ಮಾತನಾಡಿದ ಯಡಿಯೂರಪ್ಪ, ಇದು ಪೂರ್ವ ಜನ್ಮದ ಪುಣ್ಯಕಾರ್ಯ. ಇನ್ನು ಎರಡು ವರ್ಷಗಳಲ್ಲಿ ಅನುಭವ ಮಂಟಪ ನಿರ್ಮಾಣ ಪೂರ್ಣಗೊಳ್ಳಲಿದೆ. ಅದರ ಜವಾಬ್ದಾರಿಯನ್ನು ಬಸವರಾಜ ಪಾಟೀಲ ಸೇಡಂ ಅವರಿಗೆ ಒಪ್ಪಿಸಿದ್ದೇನೆ. ಈಗಾಗಲೇ ನೂರು ಕೋಟಿ ಋೂ. ಬಿಡುಗಡೆ ಮಾಡಿದ್ದೇನೆ. ನಾಲ್ಕೈದು ದಿನಗಳಲ್ಲಿ ಮತ್ತೆ 100 ಕೋಟಿ ಬಿಡುಗಡೆ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರನ್ನೇ ಅನುಭವ ಮಂಟಪ ಉದ್ಘಾಟನೆಗೆ ಕರೆತರಲಾಗುವುದು ಎಂದು ಹೇಳಿದರು.

ವಚನ ವಿಶ್ವ ವಿದ್ಯಾಲಯ ಆರಂಭಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಪ್ರತಿ ವರ್ಷ ಬಸವ ಉತ್ಸವ ಮಾಡುವಂತೆ ಕೋರಿದ್ದಾರೆ. ಹಿರಿಯರ ಸಲಹೆ ಪಡೆದು ವಚನ ವಿಶ್ವ ವಿದ್ಯಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳುತ್ತೇನೆ. ಇನ್ನೂ 100 ಕೋಟಿ ರೂಪಾಯಿ ಖರ್ಚಾದರೂ ಚಿಂತೆಯಿಲ್ಲ. ಇಲ್ಲಿ ನನೆಗುದಿಯಲ್ಲಿರೋ ಎಲ್ಲ ಕೆಲಸ ಪೂರ್ಣಗೊಳಿಸುತ್ತೇನೆ ಎಂದರು.

ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಬಸವಣ್ಣನವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡವರು ನಮ್ಮ ಯಡಿಯೂರಪ್ಪ. ಬಡವರಿಗಾಗಿ ಬಸವ ವಸತಿ ಯೋಜನೆಗೆ ಜಾರಿಗೆ ತಂದಿದ್ದರು. ಬಸವಕಲ್ಯಾಣದ ಅನುಭವ ಮಂಟಪದ ಕಲ್ಪನೆ ಇಟ್ಟುಕೊಂಡು ದೆಹಲಿಯಲ್ಲಿ ಪಾರ್ಲಿಮೆಂಟ್ ಕಟ್ಟಡ ಕಟ್ಟಲಾಗುತ್ತಿದೆ. ಅದರಂತೆ ಇಂದು ಈ ಕಾರ್ಯದಲ್ಲಿ ಭಾಗವಹಿಸಿರುವುದರಿಂದ ನನ್ನ ಜೀವನ ಪಾವನವಾಯಿತು ಎಂದರು.

ಭಾಲ್ಕಿಯ ಬಸವಲಿಂಗ ಪಟ್ಟದದೇವರು ಸಾನ್ನಿಧ್ಯತೆ ವಹಿಸಿದ್ದರು. ಹಾರಕೂಡ ಶ್ರೀ ಸೇರಿದಂತೆ ರಾಜ್ಯದ ವಿವಿಧ ಮಠಗಳ ಮಠಾಧೀಶರು ಉಪಸ್ಥಿತರಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಸಚಿವ ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಂಸದರಾದ ಭಗವಂತ ಖೂಬಾ, ಉಮೇಶ್ ಜಾಧವ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್