ಪಾಟ್ನಾ: ಕೊರೊನಾ ಸೋಂಕಿನ ಪ್ರಕರಣಗಳು ಮತ್ತು ಅದರಿಂದ ಉಂಟಾಗುತ್ತಿರುವ ಸಾವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದರಿಂದ ಬಿಹಾರ ಸರ್ಕಾರ ರಾಜ್ಯದಲ್ಲಿ ಇರುವ ಲಾಕ್‌ಡೌನ್ ಅನ್ನು ಸೆಪ್ಟೆಂಬರ್ 6 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ಅನ್ ಲಾಕ್ 3.0 ಮಾರ್ಗಸೂಚಿಗಳಡಿಯಲ್ಲಿ, ಸೋಂಕು ಹರಡುವುದನ್ನು ತಡೆಗಟ್ಟಲು ಕಂಟೈನ್‌ಮೆಂಟ್ ವಲಯಗಳು ಮತ್ತು ಅಗತ್ಯವೆಂದು ಪರಿಗಣಿಸಲಾದ ಇತರ ಪ್ರದೇಶಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ತಿಳಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬಿಹಾರ ರಾಜ್ಯದಲ್ಲಿ ಕೋವಿಡ್ -19 ರ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮೇಲಿನ ಸೂಚನೆಗಳಂತೆ ಕೇಂದ್ರದ ಗೃಹ ಸಚಿವಾಲಯದಿಂದ ನೀಡಲ್ಪಟ್ಟಆದೇಶದ ಅಡಿಯಲ್ಲಿ , ಈ ಇಲಾಖೆಯು ಹೊರಡಿಸಿರುವ ನಿರ್ಬಂಧಗಳಡ್ಡಿಯಲ್ಲೇ ಹೆಚ್ಚಿನ ನಿರ್ಬಂಧಗಳನ್ನು ಹೇರುವಿಕೆ ಮುಂದುವರಿಸಲಾಗುತ್ತದೆ. ಎಂದು ರಾಜ್ಯ ಸರ್ಕಾರ ಹೇಳಿಕೆ ನೀಡಿದೆ.
ಬ್ಯಾಂಕುಗಳು, ವಿಮಾ ಕಚೇರಿಗಳು ಮತ್ತು ಎಟಿಎಂಗಳು ಕಾರ್ಯನಿರ್ವಹಿಸುತ್ತಿವೆ. ಲಾಕ್ ಡೌನ್ ಸಮಯದಲ್ಲಿ ಕಾರ್ಯನಿರ್ವಹಿಸಲು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರಿಗೆ ಅವಕಾಶವಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಅಗತ್ಯ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಾಹಿತಿ ತಂತ್ರಜ್ಞಾನ ಕಂಪನಿಗಳು, ಇಂಟರ್ನೆಟ್ ಸೇವಾ ಪೂರೈಕೆದಾರರು, ಬ್ರಾಡ್‌ಬ್ಯಾಂಡ್ ಮತ್ತು ಕೇಬಲ್ ಸೇವೆಗಳು ಸಹ ಕಾರ್ಯನಿರ್ವಹಿಸಬಹುದು. ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ಇ-ಕಾಮರ್ಸ್ ಸೇವೆಗಳಿಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail