ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ನಿಮ್ಮ ಆಡಳಿತ ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ಬಿಜೆಪಿ ಟ್ವೀಟ್‌ನಲ್ಲಿ ಕಟುವಾಗಿ ಕುಟುಕಿದೆ.
ನೆರೆ ಸಂತ್ರಸ್ತರಿಗೆ ಇನ್ನೂ ನಯಾ ಪೈಸೆ ಹಣ ನೀಡಿಲ್ಲ. ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರವಾಗಿದೆ. ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ಆರ್‌ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನಾನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಸಿದ್ದು ಟೀಕಿಸಿದರು.
ಇನ್ನು ಸಿಎಂ ವೈಮಾನಿಕ ಸಮೀಕ್ಷೆಯಿಂದ ಯಾವುದೇ ಪ್ರಯೋಜನ ಇಲ್ಲ. ಜನರ ಜತೆ ಮಾತನಾಡಿಲ್ಲ, ನೆರೆ ಪೀಡಿತ ಪ್ರದೇಶಗಳಿಗೆ ಹೋಗಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.
ಇದನ್ನೂ ಓದಿರಿ: ಇಂಥ ಭ್ರಷ್ಟ ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಸಿದ್ದು ಕಿಡಿ
ಅದಕ್ಕೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದ್ದು, ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿಯಲ್ಲಿ 3000 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡದ್ದು ದುರ್ದೈವ. ಅನ್ನದಾತರು ಸಾವಿಗೆ ಶರಣಾಗುತ್ತಿದ್ದರೆ ನೀವು ಮಾತ್ರ ನೆಮ್ಮದಿಯಾಗಿ ನಿದ್ರಿಸುತ್ತಿದ್ದಿರಿ, ಅಲ್ಲವೇ ಎಂದು ವ್ಯಂಗ್ಯವಾಡಿದೆ.
ನಿಮ್ಮ ದುರಾಡಳಿತದಲ್ಲಿ ಬೆಳಗಾವಿಯ ರೈತ ವಿಠ್ಠಲ ಅರಭಾವಿ ಆತ್ಮಹತ್ಯೆ ಮಾಡಿಕೊಂಡಾಗ, “ರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ಹೇಳಿದ್ದಿರಿ. ಒಬ್ಬ ಮುಖ್ಯಮಂತ್ರಿಯಾಗಿ ಆಡುವ ಮಾತೇ ಇದು ಸಿದ್ದರಾಮಯ್ಯ ಎಂದು ಪ್ರತ್ನಿಸಿದೆ.
ಮಾನ್ಯ @siddaramaiah,
2013-14 – 104
2014-15 – 128
2015-16 – 1483
2016-17 – 1185
2018-19 – 900ನಿಮ್ಮ ಅವಧಿಯಲ್ಲಿ 3 ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಮುಖ್ಯಮಂತ್ರಿಯಾಗಿ ಅವರ ಕಣ್ಣೀರು ಓರೆಸುವ ಬದಲು ಟಿಪ್ಪು ಜಯಂತಿ ಆಚರಣೆಯಲ್ಲಿ ನಿರತರಾಗಿದ್ದಿರಿ, ಅಲ್ಲವೇ?#AnswerMaadiSiddaramaiah
— BJP Karnataka (@BJP4Karnataka) October 25, 2020