NEWSನಮ್ಮರಾಜ್ಯರಾಜಕೀಯ

ಅಗತ್ಯವಸ್ತುಗಳ ಬೆಲೆ ಏರಿಸಿ ಜನ ಸಾಮಾನ್ಯರ ಲೂಟಿಗೆ ನಿಂತ ಬಿಜೆಪಿ ಸರ್ಕಾರ : ಮೋಹನ್ ದಾಸರಿ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನೂರರ ಗಡಿಯತ್ತ ಪೆಟ್ರೋಲ್, ಡೀಸೆಲ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಜನ ವಿರೋಧ ನೀತಿ ಹಾಗೂ ಬಿಜೆಪಿ ಸರ್ಕಾರದ ದುರಾಡಳಿತ ವಿರುದ್ಧ ಆಮ್ ಆದ್ಮಿ ಪಕ್ಷ ಎಳ್ಳು ನೀರು ತರ್ಪಣ ಬಿಡುವ ಅಭಿಯಾನ ಹಮ್ಮಿಕೊಳ್ಳಲಿದೆ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಹೇಳಿದ್ದಾರೆ.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ನಂಬಿ ಮತ ನೀಡಿದ್ದ ಜನರನ್ನೇ ಹುರಿದು ಮುಕ್ಕುತ್ತಿದೆ. “ಅಚ್ಚೇದಿನ್ ಆಯೇಗಾ” ಎಂದು ಹೇಳಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರನ್ನು ಲೂಟಿ ಹೊಡೆಯುತ್ತಿದೆ. ಇಂತಹ ಕೆಟ್ಟ ಸರ್ಕಾರ ನಮಗೆ ಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಿನಬಳಕೆ ವಸ್ತುಗಳು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಬಿಜೆಪಿ ಸರ್ಕಾರದ ಈ ಎಲ್ಲಾ ವೈಫಲ್ಯಗಳನ್ನು ಮನೆ, ಮನೆಗೆ ತಲುಪಿಸುವ ಕಾರ್ಯಕ್ರಮ ಸೇರಿದಂತೆ ಎಳ್ಳು, ನೀರು ತರ್ಪಣ ಬಿಡುವ ಅಭಿಯಾನವನ್ನು ಟ್ವಿಟರ್, ಫೇಸ್‌ಬುಕ್ ಸೇರಿದಂತೆ ಎಲ್ಲಾ ರೀತಿಯ ಸಾಮಾಜಿಕ ಜಾಲತಾಣದಲ್ಲಿ ಹಮ್ಮಿಕೊಳ್ಳಲಾಗುವುದು. ಜನಾಭಿಪ್ರಾಯ ವಿಡಿಯೋ, ಜನ ಸಭೆ, ವಾರ್ಡ್ ಮಟ್ಟದ ನಾಗರಿಕ ಸಭೆಗಳನ್ನು ಏರ್ಪಡಿಸಲಾಗುವುದು ಎಂದು ಹೇಳಿದರು.

ಈ ಹಿಂದೆ ಸರ್ಕಾರಿ ಗೋದಾಮುಗಳನ್ನು ಹೆಗ್ಗಣಗಳು ಹಾಳು ಮಾಡುತ್ತಿದ್ದವು ಆದರೆ ಈಗ ಆ ಹೆಗ್ಗಣಗಳ ಜಾಗಕ್ಕೆ ಬಿಜೆಪಿ ಸರ್ಕಾರ ಬಂದು ಕೂತಿದೆ. ಜನರನ್ನೇ ತಿನ್ನುವ ಹೆಗ್ಗಣಗಳ ಸರ್ಕಾರ ಎಂದು ಲೇವಡಿ ಮಾಡಿದರು.

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಅವರು ಮಾತನಾಡಿ, ಜನರನ್ನೇ ತಿನ್ನುವ ಈ ದುಷ್ಟ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸದ ಹೊರತು ಈ ದೇಶಕ್ಕೆ ಉಳಿಗಾಲವಿಲ್ಲ. ಆದ ಕಾರಣ ಆಮ್ ಆದ್ಮಿ ಪಕ್ಷ ಈ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ, ಈ ಅಭಿಯಾನಕ್ಕೆ ಜನಸಾಮಾನ್ಯರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...