NEWSನಮ್ಮರಾಜ್ಯರಾಜಕೀಯ

ಬಿಜೆಪಿ-ಜೆಡಿಎಸ್‌ ಒಳ‌ಒಪ್ಪಂದ ಹೊಸತಲ್ಲ,ಅವಕಾಶವಾದಿ ರಾಜಕಾರಣ ಜೆಡಿಎಸ್‌ನ ನೈಜ ಸಿದ್ಧಾಂತ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ನ ಒಳ‌ಒಪ್ಪಂದದ ರಾಜಕಾರಣ ಹೊಸತಲ್ಲ. ಹಿಂದೆಯೂ ಮಾಡಿಕೊಂಡಿದ್ದರು, ಕಳೆದ ಉಪಚುನಾವಣೆಯಲ್ಲೂ ಈ ಆರೋಪ ಇತ್ತು, ಮುಂದೆಯೂ ನಡೆಯಬಹುದು. ಅವಕಾಶವಾದಿ ರಾಜಕಾರಣ ಜೆಡಿಎಸ್‌ನ ನೈಜ ಸಿದ್ಧಾಂತ, ಇದನ್ನು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಮುಂದುವರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯದಂತೆ ಸರ್ಕಾರಕ್ಕೆ 2 ಬಾರಿ ಪತ್ರ ಬರೆದಿದ್ದೆ, ಆದರೂ ಇಂದು ಸರ್ಕಾರ ಪೂರ್ವತಯಾರಿ ಇಲ್ಲದೆ ಪದವಿ ಕಾಲೇಜುಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಸರಿಯಲ್ಲ, ಕಾಲೇಜು ನಡೆಸಲೇಬೇಕು ಎಂದು ನಿರ್ಧರಿಸಿದ್ದರೆ ಸರ್ಕಾರವೇ ವಿದ್ಯಾರ್ಥಿಗಳ ಸೋಂಕು ಪರೀಕ್ಷೆಯನ್ನು ಮಾಡಬೇಕು ಎಂದು ಆಗ್ರಹಿಸಿದರು.

ಸಂಪತ್‌ರಾಜ್ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆಯಷ್ಟೆ, ವಿಚಾರಣೆ ನಡೆಯುವ ಮೊದಲೆ ಅವರನ್ನು ಅಪರಾಧಿ ಅಥವಾ ನಿರಪರಾಧಿ ಎಂದು ನಿರ್ಧರಿಸಲಾಗುವುದಿಲ್ಲ. ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ. ಈ ಹಂತದಲ್ಲಿ ನಾವು ಅವರ ಪರವೂ ಇಲ್ಲ, ವಿರುದ್ಧವೂ ಇಲ್ಲ ಎಂದು  ಹೇಳಿದ್ದಾರೆ.

ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳು ಇನ್ನೂ ಇವೆ, ಅವುಗಳ ಅಭಿವೃದ್ಧಿಗೂ ಸರ್ಕಾರ ಪ್ರಾಧಿಕಾರ ರಚನೆ ಮಾಡಲಿ. ಮತ ಓಲೈಕೆ ಕಾರಣಕ್ಕಾಗಿ ಯಾವುದೋ ಒಂದು ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಸರಿಯಲ್ಲ. ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರೂ ಒಂದಾಗಿ ಸಾಗಿದಾಗ ಮಾತ್ರ ಸಮಾನತೆ ತರಲು ಸಾಧ್ಯ ಎಂದು ತಿಳಿಸಿದರು.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು ಅವರ ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡುವ ನೈಜ ಕಾಳಜಿ ಬಿಜೆಪಿ ಸರ್ಕಾರಕ್ಕೆ ಇಲ್ಲ ಎಂದು ದೂರಿದರು.

ಈ ಬಾರಿಯ ಪ್ರವಾಹದಿಂದ ರಾಜ್ಯದಲ್ಲಿ ಸುಮಾರು ರೂ.25,000 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ, ಆದರೆ ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವುದು ರೂ.577 ಕೋಟಿ ಮಾತ್ರ. ಇದರಲ್ಲಿ ಎಷ್ಟು ಜನರಿಗೆ ನೆರೆ ಪರಿಹಾರ ನೀಡಲು ಸಾಧ್ಯ? ರಾಜ್ಯ ಸರ್ಕಾರದ ಬಳಿಯೂ ಹಣವಿಲ್ಲ, ಕೇಂದ್ರವೂ ನೀಡುತ್ತಿಲ್ಲ. ಹೀಗಾದರೆ ಜನರಿಗೆ ಯಾರು ದಿಕ್ಕು ಎಂದು ಪ್ರಶ್ನಿಸಿದರು.

ರೈತರ ಆದಾಯ ದುಪ್ಪಟ್ಟುಗೊಳಿಸ್ತೀವಿ ಅಂತ ಭರವಸೆ ನೀಡಿ, ಈಗ ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನೂ ನೀಡದೆ ರೈತರನ್ನು ಕಷ್ಟಕ್ಕೆ ತಳ್ಳಿ ಕೈತೊಳೆದುಕೊಂಡಿದೆ. ಇದರ ಮೇಲೆ ರೈತವಿರೋಧಿ ಕಾನೂನುಗಳನ್ನು ಬೇರೆ ಜಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಉಳ್ಳವರ ಸರ್ಕಾರದಲ್ಲಿ ಅನ್ನದಾತ ನರಳಾಡುತ್ತಿದ್ದಾನೆ ಎಂದು ಹೇಳಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ