NEWSನಮ್ಮಜಿಲ್ಲೆರಾಜಕೀಯ

ಶಿರಾದಲ್ಲಿ ಮೊದಲ ಬಾರಿಗೆ ಖಾತೆ ತೆರೆದ ಬಿಜೆಪಿ: ಗೆಲುವಿನ ನಗೆ ಬೀರಿದ ರಾಜೇಶ್ ಗೌಡ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಇದೆ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದ್ದು, ಅಭ್ಯರ್ಥಿ ರಾಜೇಶ್ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದ ಆರ್‌ಆರ್‌ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಎರಡೂ ಕ್ಷೇತ್ರಗಳಲ್ಲೂ ಕೇಸರಿ ಪಡೆ ಗೆಲುವಿನ ನಗೆ ಬೀರಿದೆ.

ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಬಿಜೆಪಿಯ ರಾಜೇಶ್ ಗೌಡ ಅವರು 72,739 ಮತಗಳನ್ನ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ 60,321 ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 34,707 ವೋಟ್​ ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 12,418 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮೊದಲಿನಿಂದಲೂ ಸತತ ಮುನ್ನಡೆ ಸಾಧಿಸುವ ಮೂಲಕ ಗೆಲುವು ಪಡೆದುಕೊಂಡು ಶಿರಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ