NEWSನಮ್ಮರಾಜ್ಯರಾಜಕೀಯ

ಜೆಡಿಎಸ್‌-ಬಿಜೆಪಿ ಒಳ ಒಪ್ಪಂದದಿಂದ ಬೈಎಲೆಕ್ಷನ್‌ನಲ್ಲಿ ಬಿಜೆಪಿ ಗೆದ್ದಿತು: ಸಿದ್ದರಾಮಯ್ಯ ಆರೋಪ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್ ಮತಗಳನ್ನು ವರ್ಗಾಯಿಸಿದ ಕಾರಣ ಆರ್‌ಆರ್ ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಅರಸಿಕೇರೆ ತಾಲೂಕಿನ ಹೊರಿಮಂಗಲಪುರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉಪ ಚುನಾವಣೆಯಲ್ಲಿ ಆಂತರಿಕ ರಾಜಕೀಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ದೂರಿದರು.

ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ನೆಲೆಯನ್ನು ಕಳೆದುಕೊಂಡಿದ್ದು, ಬಿಜೆಪಿ ಅದರ ರಾಜಕೀಯ ಲಾಭ ಪಡೆದುಕೊಂಡಿದೆ ಎಂದು ವ್ಯಂಗ್ಯವಾಡಿದರು. ಇನ್ನು ಬಸವಕಲ್ಯಾಣ ಉಪಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ನಿರ್ಧಾರ ತೆಗೆದುಕೊಳ್ಳುವ ಮೂಲಕ ಜೆಡಿಎಸ್ ನಾಯಕರು ಚುನಾವಣೆಗೂ ಮುನ್ನವೇ ಬಿಜೆಪಿಗೆ ಶರಣಾಗಿದ್ದಾರೆ ಎಂದರು.

ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಿವೃದ್ಧಿ ಕಾರ್ಯಗಳ ಸೋಗಿನಲ್ಲಿ ಹಣ ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನು ಹಿಂದಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಗಲು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಸ್ಟಾರ್ ಹೋಟೆಲ್‌ಗಳಲ್ಲಿ ಹೆಚ್ಚು ಸಮಯ ಕಳೆದರು ಎಂಬ ಆರೋಪ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು ಎಂದು ಜೆಡಿಎಸ್‌ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್