NEWSನಮ್ಮಜಿಲ್ಲೆರಾಜಕೀಯ

ಶಿವಾನಂದ ವೃತ್ತ ಉಕ್ಕಿನ ಸೇತುವೆ ಕಾಮಗಾರಿ ಶೀಘ್ರ ಮುಗಿಸಲು ಆಗ್ರಹಿಸಿ ಎಎಪಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯೋಜನೆ ಕಾರ್ಯಾರಂಭ ಮಾಡಿ ಅದನ್ನು ಕಾಲಾವಧಿಯೊಳಗೆ ಮುಗಿಸದೇ ಪ್ರತಿ ವರ್ಷ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿಕೊಂಡು, ಜನರ ತೆರಿಗೆ ಹಣ ನುಂಗುವುದನ್ನೇ ಅಭ್ಯಾಸ ಮಾಡಿಕೊಂಡಿರುವುದಕ್ಕೆ ತಾಜಾ ಉದಾಹರಣೆ ಎಂದರೆ ಶಿವಾನಂದ ವೃತ್ತದ ಬಳಿ ನಿರ್ಮಿಸಲು ಹೊರಟಿರುವ ಉಕ್ಕಿನ ಸೇತುವೆ ಎಂದು  ಎಎಪಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದರು.

ನಗರದ ಶಿವಾನಂದ ವೃತ್ತದ ಉಕ್ಕಿನ ಸೇತುವೆ ಬಳಿ ಆಮ್ ಆದ್ಮಿ ಪಕ್ಷದಿಂದ ನಡೆದ ಪ್ರತಿಭಟನೆ ವೇಳೆ ಮಾತನಾಡಿದರು.

ಸುಮಾರು 3 ವರ್ಷಗಳ ಹಿಂದೆ ಅಂದರೆ  ಜೂನ್ 30, 2017 ರಂದು ಕಾರ್ಯಾದೇಶವಾದಾಗಿನಿಂದ ಕೇವಲ ಶೇ. 40 ರಷ್ಟು ಕಾಮಗಾರಿ  ನಡೆಸಿರುವುದನ್ನು ನೋ ಡಿದರೆ ಬಿಬಿಎಂಪಿಯ ಆಡಳಿತ ವೈಖರಿಗೆ ಹಿಡಿದ ಕನ್ನಡಿಯಾಗಿದೆ‌.

ಈ ಕಾಮಗಾರಿಯ ಅವಧಿ 18 ತಿಂಗಳು ಅಂದರೆ 2019ರ ಮಾರ್ಚ್ ಅಂತ್ಯಕ್ಕೆ ಮುಗಿಸಬೇಕಿತ್ತು, ಈಗಾಗಲೇ ಬರೋಬ್ಬರಿ 27 ತಿಂಗಳುಗಳು ಕಳೆದಿವೆ. 2020 ಮುಗಿಯುತ್ತಾ ಬಂದರೂ ಅದರ ಸುಳಿವಿಲ್ಲ. ಈ ಉಕ್ಕಿನ ಸೇತುವೆಯನ್ನು ಪ್ರಾರಂಭಿಸುವಾಗ ಅಂದಾಜು ಮಾಡಿದ್ದ ಯೋಜನಾ ವೆಚ್ಚ 19 ಕೋಟಿ ರೂ. ಈಗಾಗಲೇ ಎರಡು ಬಾರಿ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿದ್ದು 60 ಕೋಟಿ ರೂ.ಗೆ ಮುಟ್ಟಿದೆ. ಇದೇ ರೀತಿ ಎಲ್ಲಾ ಕಾಮಗಾರಿಗಳನ್ನು ಕಾಲಾವಧಿಯಲ್ಲಿ ಮುಗಿಸದೆ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಆರೋಪಿಸಿದರು.

ಈಗ ಇಲ್ಲಿ ಕಾಮಗಾರಿ ಆರಂಭಿಸಿದರೆ ಹಿಂದೆಂದೂ ಕಾಣದಷ್ಟು ಸಂಚಾರ ದಟ್ಟಣೆ ಉಂಟಾಗುತ್ತದೆ.
ಶಿವಾನಂದ ಸರ್ಕಲ್ ಮಾತ್ರವಲ್ಲದೆ ಸುತ್ತಲಿನ ಮಲ್ಲೇಶ್ವರ, ಆನಂದರಾವ್ ವೃತ್ತ ಹಾಗೂ ಇನ್ನಿತರೆ ಕಡೆಗಳಲ್ಲೂ ಸಂಚಾರ ದಟ್ಟಣೆ ವಿಪರೀತವಾಗಲಿದೆ. ಮೊದಲು ಮೇಲ್ಸೇತುವೆ ಉದ್ದವನ್ನು 326 ಮೀ.ಗೆ ನಿಗದಿ ಮಾಡಲಾಗಿತ್ತು. ಕಾಮಗಾರಿ ಆರಂಭವಾಗಿ ಒಂದೂವರೆ ವರ್ಷದ ನಂತರ ರೇಸ್‌ಕೋರ್ಸ್ ರಸ್ತೆ ದಿಕ್ಕಿಗೆ ಮೇಲ್ಸೇತುವೆ ಉದ್ದವನ್ನು 493 ಮೀ.ಗೆ ಏರಿಕೆ ಮಾಡಲಾಗಿದೆ ಎಂಬುದು ಏಕೆ ಎಂದು ಅಧಿಕಾರಿಗಳು ಉತ್ತರಿಸಬೇಕು ಎಂದು ಆಗ್ರಹಿಸಿದರು.

ಪ್ರಸ್ತುತ ಮುಗಿದಿರುವ ಕಾಮಗಾರಿಯ ಗುಣಮಟ್ಟ ಸಹ ಕಳಪೆ ಆಗಿದ್ದು ಈಗಾಗಲೇ ಹಾಕಿರುವ ಉಕ್ಕಿನ ಕಂಬಗಳ ಸಾಮರ್ಥ್ಯವೂ ಸಹ ಅನುಮಾನಸ್ಪದವಾಗಿದ್ದು ಅರ್ಧ ಕಾಮಗಾರಿ ಮುಗಿಸಿ ನಿಲ್ಲಿಸಿರುವ ಕಂಬಗಳು ತುಕ್ಕು ಹಿಡಿದಿವೆ.  ದೆಹಲಿ ಸರ್ಕಾರ ಈಗಾಗಲೇ ಸುಮಾರು 25 ಕ್ಕೂ ಹೆಚ್ಚು ಫ್ಲೈಓವರ್‌ಗಳನ್ನು ಸುಮಾರು 4 ವರ್ಷಗಳ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಿದೆ, ಇದು ಎಂಜಿನಿಯರಿಂಗ್ ಶ್ರೇಷ್ಠತೆಗೆ ಸಾಕ್ಷಿಯಾಗಿದೆ.

ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸದಿದ್ದರೆ ಎಲ್ಲಾ ಅಪೂರ್ಣ ಕಾಮಗಾರಿಗಳ ಎದುರು ಸರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮೀಕಾಂತ್ ರಾವ್, ಉಪಾಧ್ಯಕ್ಷ ಸುರೇಶ್ ರಾಥೋಡ್, ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಮುಖ್ಯ ವಕ್ತಾರ ಶರತ್ ಖಾದ್ರಿ, ಜ್ಯೋತೀಶ್, ರಾಜಾಜಿನಗರ ಕ್ಷೇತ್ರದ ಹಿರಿಯ ಮುಖಂಡ ಗುರುಮೂರ್ತಿ, ವಿಜಯ್ ಕುಮಾರ್, ಜಗದೀಶ್ ಚಂದ್ರ, ಸತೀಶ್ ಗೌಡ ಜನನಿ ಭರತ್, ಪೂರ್ಣಿಮ ನಾಯ್ಡು, ಅಲ್ಪಸಂಖ್ಯಾತ ಘಟಕದ ಫರೀದ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...