NEWSನಮ್ಮಜಿಲ್ಲೆರಾಜಕೀಯ

ಆರೋಪ, ಟೀಕೆಯಿಂದ ಜನರ ಸಮಸ್ಯೆ ಬಗೆ ಹರಿಯದು: ಮಾಜಿ ಸಿಎಂ ಎಚ್‌ಡಿಕೆ

ಆರ್.ಆರ್. ನಗರ ವಾರ್ಡ್ ನ ಬಂಗಾರಪ್ಪ ನಗರದಲ್ಲಿ ಕೃಷ್ಣಮೂರ್ತಿ ಪರವಾಗಿ ಮತಯಾಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿಮ್ಮ ಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ ನೀವು ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ಅವರನ್ನು ಗೆಲ್ಲಿಸಿಕೊಡಿ ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಪತದಾರರಲ್ಲಿ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದರು.

ಬುಧವಾರ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಆರ್.ಆರ್. ನಗರ ವಾರ್ಡ್ ನ ಬಂಗಾರಪ್ಪ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.

ಕಾಂಗ್ರೆಸ್‌ ಐದು ವರ್ಷ ಆಳ್ವಿಕೆ ನಡೆಸಿದೆ. ಬಿಜೆಪಿಯೂ ಈ ಹಿಂದೆ ಐದು ವರ್ಷ ಆಡಳಿತ ನಡೆಸಿ ಪ್ರಸ್ತುತ ಅಧಿಕಾರದಲ್ಲಿದೆ. ಆದರೆ ನಿಮಗೆ ಬೇಕಾದ ಸೌಲಭ್ಯಗಳು ಮಾತ್ರ ಸಿಕ್ಕಿಲ್ಲ. ಹೀಗಾಗಿ ನಿಮ್ಮ ಸಮಸ್ಯೆಗೆ ಸ್ಪಂದಿಸುವ ಪಕ್ಷವಾದ ಜೆಡಿಎಸ್‌ ಅಭ್ಯರ್ಥಿಯನ್ನು ಗೆಲ್ಲಿಸಿ ನೀವು ನೆಮ್ಮದಿಯ ಜೀವನ ಮಾಡಿ ಎಂದು ಹೇಳಿದರು.

ಬಿಜೆಪಿಯ ಮತ್ತು ಕಾಂಗ್ರೆಸ್ ನಾಯಕರೇ ಬಂದು ಭಾಷಣಗಳಲ್ಲಿ ಹೇಳಿರುವುದನ್ನು ಗಮನಿಸಿದ್ದೇನೆ. ಬಿಜೆಪಿಗೆ ಹೋಗಿರುವ, ಬಿಜೆಪಿ ಅಭ್ಯರ್ಥಿ ಹಲವಾರು ರೀತಿಯಲ್ಲಿ ಹಣ ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ.

ಜತೆಗೆ ಜನಗಳನ್ನ ಭಯಭೀತರನ್ನಾಗಿ ಮಾಡುತ್ತಾರೆ, ಸುಳ್ಳು ಮೊಕದ್ದಮೆಗಳನ್ನು ಹೂಡುತ್ತಾರೆ. ಆದರೆ ಅದನ್ನು ಎದುರಿಸಲು ನಾವು ತಯಾರಾಗಿದ್ದೇವೆ ಎಂದು ಹೇಳುತ್ತಾರೆ.

ಇನ್ನು ಬಿಜೆಪಿ ಅಭ್ಯರ್ಥಿ ಏನು ಹೇಳುತ್ತಾರೆ, ಈ ಕ್ಷೇತ್ರದಲ್ಲಿ ಕನಕಪುರದಿಂದ ಬಂದಿರುವವರು ಕೊಲೆಗಳಾಗುತ್ತಿರುವುದಕ್ಕೆ ಪ್ರೇರೇಪಣೆ ಕೊಡುತ್ತಿದ್ದಾರೆ ಎಂದು ಹೇಳುತ್ತಾರೆ. ಇದೆಲ್ಲವನ್ನೂ ನಾನು ಗಮನಿಸುತ್ತಿದ್ದೇನೆ. ಈ ಕ್ಷೇತ್ರದ ಜನತೆಗೆ ಬೇಕಾಗಿರೋದು ಶಾಂತಿಯ ವಾತಾವರಣ ನಿಮ್ಮ ದುಡಿಮೆಗೆ ನಿಮ್ಮ ಕುಟುಂಬಗಳು ಗೌರವಯುತವಾಗಿ ಬದುಕು ಸಾಗಿಸಬೇಕಾಗಿರುವುದು. ಅಂಥ ವಾತಾವರಣವನ್ನು ನಾವು ಕಲ್ಪಸಿಕೊಡುತ್ತೇವೆ ಎಂದು ಹೇಳಿದರು.

ಒಂದು ಪಕ್ಷದವರನ್ನು ಇನ್ನೊಂದು ಪಕ್ಷದವರು ಟೀಕೆ ಆರೋಪ ಮಾಡಿದರೆ ಅದರಿಂದ ಕ್ಷೇತ್ರದ ಜನರ ಸಮಸ್ಯೆ ಬಗೆಹರಿಯದು. ಹೀಗಾಗಿ ನಿಮ್ಮ ಸಮಸ್ಯೆ ಆಲಿಸದೆ ಬರಿ ಆರೋಪ ಮಾಡಿಕೊಂಡು ವೊಟು ಕೇಳುವವರನ್ನು ದೂರವಿಟ್ಟು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಎಂದು ಮನವಿ ಮಾಡಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...