NEWSನಮ್ಮರಾಜ್ಯರಾಜಕೀಯ

ಉಪಸಮರ: ರ‍್ಯಾಲಿಯಲ್ಲಿ 50 ಮಂದಿಗಷ್ಟೇ ಅವಕಾಶ – ನಿಯಮ ಉಲ್ಲಂಘಿಸಿದರೆ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಡುವೆ ಉಪ ಸಮರದ ಭರಾಟೆ ರಂಗೇರುತ್ತಿದ್ದು, ಈ ನಡುವೆ ಅಭ್ಯರ್ಥಿಗಳ ಬೆಂಬಲಿಗರು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸಬೇಕು ಇಲ್ಲದಿದ್ದರೇ ನಿಮ್ಮ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಡುವೆಯೂ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಉಪ ಚುನಾವಣೆ ರ‍್ಯಾಲಿಯಲ್ಲಿ ಕೇವಲ 50 ಮಂದಿ ಮಾತ್ರ ಭಾಗವಹಿಸಲು ಅವಕಾಶ ನೀಡಿರುವುದಾಗಿ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ಈ ಮಾರ್ಗ ಸೂಚಿ ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳಿಗೆ ಅನ್ವಯಿಸುತ್ತದೆ. ಈ ಬಗ್ಗೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದು ಒಂದು ವೇಳೆ ಮಾರ್ಗ ಸೂಚಿಯನ್ನು ಉಲ್ಲಂಘಿಸಿದರೆ ಸೂಕ್ತ ಕ್ರಮ ಜರುಗಿಸುವುದಾಗಿಯೂ ತಿಳಿಸಿದ್ದಾರೆ.

ಆಯಾ ಕ್ಷೇತ್ರಗಳಿಗೆ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಸ್ಥಳವನ್ನು ನಿರ್ಧರಿಸಿದರೇ ಅಂತಹ ಕ್ಷೇತ್ರಗಳಲ್ಲಿ ಸಾರ್ವಜನಿಕ ಭಾಷಣಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ, ಚುನಾವಣಾ ರ‍್ಯಾಲಿಗಳಲ್ಲಿ ಭಾಗವಹಿಸುವವರು ಅಧಿಕಾರಿಗಳು ಬರೆದ ವೃತ್ತದಲ್ಲಿ ನಿಂತು ಕೊಳ್ಳಬೇಕು, ರ‍್ಯಾಲಿಯಲ್ಲಿ 50ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ ಎಂದು ತಿಳಿಸಿದ್ದಾರೆ.

ಬೇರೆ ಚುನಾವಣೆಗಳ ರೀತಿಯಲ್ಲಿ ಈ ಚುನಾವಣೆಯಲ್ಲಿಯೂ ವಿಡಿಯೋ ಗ್ರಾಪರ್ ಗಳಿದ್ದು, ಅವರು ರ‍್ಯಾಲಿಯ ಎಲ್ಲಾ ಚಿತ್ರಣವನ್ನು ದಾಖಲಿಸುತ್ತಾರೆ, ಒಂದು ವೇಳೆ ನೀತಿ ಸಂಹಿತೆ ಉಲ್ಲಂಘನೆ ಮತ್ತು ಸುರಕ್ಷತಾ ಕ್ರಮಗಳು ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ವಿಡಿಯೋ ಮೂಲಕ ದಾಖಲೆಗಳನ್ನು ಪಡೆದು ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಫೇಸ್ ಮಾಸ್ಕ್, ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್, ಕೈಗವಸು ಮತ್ತು ಪಿಪಿಇ ಕಿಟ್ ಕಡ್ಡಾಯವಾಗಿದೆ.

ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನ್, ಕೈಗವಸು ಮುಂತಾದ ಅಗತ್ಯ ಸಲಕರಣೆಗಳನ್ನು ಆಯೋಗವೇ ಮತದಾರರಿಗೆ ಮತ್ತು ಸಿಬ್ಬಂದಿಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

1 Comment

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...