NEWSನಮ್ಮರಾಜ್ಯರಾಜಕೀಯ

ವರ್ಷಾಂತ್ಯದಲ್ಲಿ ರಾಜ್ಯ ರಾಜಕಾರಣದಲ್ಲಿ ಬಹಳ ಬದಲಾವಣೆ: ಎಚ್‌ಡಿಕೆ ಭವಿಷ್ಯ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಮುಂದಿನ ಎರಡು ತಿಂಗಳು ಅಂದರೆ ನವೆಂಬರ್, ಡಿಸೆಂಬರ್ ನಂತರ ಬಹುಶಃ ರಾಜ್ಯ ರಾಜಕಾರಣದಲ್ಲಿ ಬಹಳ ಬದಲಾವಣೆ ಮುನ್ಸೂಚನೆ ಗೋಚರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು.

ನಾನು ಕಾಂಗ್ರೆಸ್ ಜತೆ ಸರ್ಕಾರ ಮಾಡಿ ತಪ್ಪು ಮಾಡಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿದ್ದು ನನ್ನದೇ ತಪ್ಪಾಗಿದೆ ಎಂದು ಶನಿವಾರ ಸಂಜೆ ತಮ್ಮ ಬಿಡದಿಯ ತೋಟದ ಮನೆಯಲ್ಲಿ ಕರೆದಿದ್ದ ಶಿಕ್ಷಕರ ಸಭೆಯಲ್ಲಿ ಕುಮಾರಸ್ವಾಮಿ ತಿಳಿಸಿದರು.

ಕಾಂಗ್ರೆಸ್ ಜತೆ ಮೈತ್ರಿ ಎಂದರೆ ಮುಳ್ಳಿನ ಮೇಲೆ ಹಾಕಿದ ಬಟ್ಟೆಯಂತಾಗಿತ್ತು. ಈಗ ಅದರ ತಪ್ಪು ಅರಿವಾಗಿದ್ದು, ಮತ್ತೆ ಅಂಥ ತಪ್ಪು  ಮರುಕಳಿಸದಂತೆ ಮುಂದಿನ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ನಮ್ಮ ಪಕ್ಷ ಅಭ್ಯರ್ಥಿಗಳನ್ನು ನಿಲ್ಲಿಸುವ ನಿಟ್ಟಿನಲ್ಲಿ ಶ್ರಮಿಸೋಣ ಎಂದು ಹೇಳಿದರು.

ಇನ್ನು ಮೈತ್ರಿವೇಳೆ ಆಗಿರುವ ತಪ್ಪನ್ನು ನಾನೇ ಸರಿ ಮಾಡುತ್ತೇನೆ. ಹೀಗಾಗಿ ಕಾರ್ಯಕರ್ತರು ಎದೆಗುಂದಬಾರದು ಎಂದು ಎಚ್.ಡಿ ಕುಮಾರಸ್ವಾಮಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನನ್ನ ಹಳೆಯ ಸ್ನೇಹಿತರು ನನ್ನ ಬಗ್ಗೆ ತುಚ್ಛವಾಗಿ ಮಾತನಾಡುತ್ತಾರೆ, ಅವರ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ. ನಾನೇನು ಅವರಿಗೆ ಅನ್ಯಾಯ ಮಾಡಿದ್ದೇನೆ ಎಂಬುದು ನನಗೆ ಗೊತ್ತಿಲ್ಲ. ನನ್ನಿಂದ ಬೆಳೆದವರೇ ನನಗೆ ಮೋಸ ಮಾಡಿ ಚೂರಿ ಹಾಕಿ ಹೋಗಿದ್ದಾರೆ. ಇಲ್ಲಿ ನನ್ನದೇ ತಪ್ಪು ಇದೆ. ನಾನು ಉತ್ತಮರ ಸಹವಾಸ ಮಾಡಿದ್ದರೆ ಇಂದು ನನಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಈ ತಪ್ಪನ್ನು ಮತ್ತೆ ಮಾಡುವುದಿಲ್ಲ ಎಂದು ಕಾರ್ಯಕರ್ತರಿಗೆ ಅಭಯ ನೀಡಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ