NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಪೌರಕಾರ್ಮಿಕರು ಕೊರೊನಾದಿಂದ ಮೃತಪಟ್ಟರೇ 50 ಲಕ್ಷ ರೂ. ಪರಿಹಾರ ಕೊಡಿ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ತವ್ಯ ನಿರತ ಪೌರಕಾರ್ಮಿಕರು ಕೊರೊನಾ ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಹಣರೂಪದ ಪರಿಹಾರ ಸರ್ಕಾರದ ಆಡಳಿತಾತ್ಮಕ ಕರ್ತವ್ಯವಾಗುತ್ತದೆ. ಪೌರಕಾರ್ಮಿಕ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜ ಗೌರವವಾಗುತ್ತದೆ ಎಂದು ಹೇಳಿದ್ದಾರೆ.

ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ ಎಂದು ಟ್ವೀಟ್‌ ಮೂಲಕ ಪೌರಕಾರ್ಮಿಕ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಈ ದಿನಗಳಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರು ವೈದ್ಯ ಸಮೂಹದಷ್ಟೆ ಪ್ರಧಾನ ಪಾತ್ರ ವಹಿಸಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ.

1 Comment

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ