ಬೆಂಗಳೂರು: ಕೊರೊನಾ ಮಹಾಮಾರಿಗೆ ತುತ್ತಾಗಿದ್ದ ಸತತ 9 ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪೂರ್ಣಗುಣಮುಖರಾಗಿದ್ದು, ಸೋಮವಾರ ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.
ಆಗಸ್ಟ್ 2ರಂದು ಬಿಎಸ್ ಯಡಿಯೂರಪ್ಪನವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಜೋವಿಡ್ ಟೆಸ್ಟ್ ನಕರಾತ್ಮಕವಾಗಿ ಬಂದಿದ್ದರಿಂದ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ತಿಳಿಸಿದ್ದಾರೆ.
ಪೊಲೀಸರ ಭದ್ರತೆಯಲ್ಲಿ ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಗಿದ್ದು ಅವರು ಸಾಗುವ ಮಾರ್ಗದ ಸುತ್ತಮುತ್ತ ಭದ್ರತೆ ಒದಗಿಸಲಾಗಿತ್ತು.