NEWSನಮ್ಮರಾಜ್ಯರಾಜಕೀಯ

ಸಿಎಂ ಕಾವೇರಿ ನಿವಾಸ, ಗೃಹ ಕಚೇರಿ ಕೃಷ್ಣಾದ 11 ಸಿಬ್ಬಂದಿಗೆ ಕೊರೊನಾ: ಆಸ್ಪತ್ರೆಗೆ ಶಿಫ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರಿ ಪದ್ಮಾವತಿ ಬಳಿಕ ಇದೀಗ ಸಿಎಂ ಕಾವೇರಿ ನಿವಾಸದಲ್ಲಿ ನಾಲ್ವರಿಗೆ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ 7 ಸಿಬ್ಬಂದಿಗೆ ಸೇರಿ ಒಟ್ಟು 11 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಿಎಂ ಕಾವೇರಿ ನಿವಾಸದಲ್ಲಿ ಅಡುಗೆ ಭಟ್ಟ ಹಾಗೂ ಮೂವರು ಮನೆ ಕೆಲಸದವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲದೆ ಸಿಎಂ ಗನ್ ಮ್ಯಾನ್, ವಿಶೇಷ ಕರ್ತವ್ಯಾಧಿಕಾರಿ ಕಾರ್ ಚಾಲಕ ಸೇರಿ ಗೃಹ ಕಚೇರಿ ಕೃಷ್ಣಾದಲ್ಲಿ ಒಟ್ಟು 7 ಮಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಆಂಬುಲೆನ್ಸ್ ಮೂಲಕ   ಕೋವಿಡ್ ಕೇರ್ ಸೆಂಟರ್‌ ಕರೆದೊಯ್ಯಲಾಗಿದೆ.

ಎಲ್ಲ ಸಿಬ್ಬಂದಿಯನ್ನು ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಸಿ)ಗೆ ಶಿಫ್ಟ್ ಮಾಡಲಾಗುತ್ತಿದೆ. ಎಲ್ಲರಿಗೂ ಅಲ್ಲೇ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಿಎಂ ಕಾವೇರಿ, ಕೃಷ್ಣದಲ್ಲಿ  ಒಟ್ಟು 50 ಜನರಿಗೆ ರ‍್ಯಾಪಿಡ್ ಆಂಟಿಜನ್ ಟೆಸ್ಟ್ ಮಾಡಲಾಗಿದ್ದು, ವರದಿ ನೆಗಿಟಿವ್ ಬಂದಿಂದ್ದು ರೋಗ ಲಕ್ಷಣ ಇದ್ದರೆ ಮತ್ತೆ ಗಂಟಲು ದ್ರವ ಪರೀಕ್ಷೆಗೆ  ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಮನೆ ಹಾಗೂ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿದೆ.

ಭಾನುವಾರ ರಾತ್ರಿಯಷ್ಟೇ ಯಡಿಯೂರಪ್ಪ ಹಾಗೂ ಅವರ ಪುತ್ರಿ ಪದ್ಮಾವತಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದೀಗ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿ ನಿವಾಸದ ಸಿಬ್ಬಂದಿಗಳಲ್ಲಿಯೂ ಸೋಂಕು ಪತ್ತೆಯಾಗಿದೆ. ಹೀಗಾಗಿ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿ ನಿವಾಸವನ್ನು 14 ದಿನಗಳು ಸೀಲ್‌ಡೌನ್‌ ಮಾಡಲಾಗಿದೆ.

1 Comment

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!