Vijayapatha – ವಿಜಯಪಥ
Friday, November 1, 2024
NEWSರಾಜಕೀಯ

ಕೊರೊನಾ ಸೋಂಕಿತರ ಚಿಕಿತ್ಸೆಗೆ ಕೊರತೆ ಇಲ್ಲ: ಸಚಿವ ಸುಧಾಕರ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಈವರೆಗೆ 80,643 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಅದರಲ್ಲಿ 695 ಅಂದರೆ ಶೇ. 0.86% ಸೋಂಕಿತರು ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಚಿಕಿತ್ಸೆಗೆ ಮೂಲಭೂತ ಸೌಕರ್ಯವನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದ್ದು ಯಾವುದೇ ಕೊರತೆಯಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅವರು ಈ ಬಗ್ಗೆ ಟ್ವೀಟ್‌ ಮಾಡಿದ್ದು, ಪ್ರತಿಯೊಬ್ಬ ರೋಗಿಗೂ ಸೂಕ್ತ ಚಿಕಿತ್ಸೆ ದೊರಕಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡಲು ಬದ್ಧವಾಗಿದೆ. ಕೊರೊನಾ ಚಿಕಿತ್ಸೆಗೆ ಮೂಲಸೌಕರ್ಯ ಒದಗಿಸುವುದು ದೊಡ್ಡ ಸವಾಲು ನಿಜ. ಆದರೆ ಅದನ್ನು ಹಿಮ್ಮೆಟ್ಟಿಸುವ ನಮ್ಮ ಸಂಕಲ್ಪ ಅದಕ್ಕಿಂತ ಬಲವಾಗಿದೆ ಎಂದು ಹೇಳಿದ್ದಾರೆ.

ನಿನ್ನೆ ರಾತ್ರಿ ಕಿಮ್ಸ್ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇರುವುದು ನನ್ನ ಗಮನಕ್ಕೆ ಬಂದ ಕೂಡಲೇ ಹೆಚ್ಚು ರೋಗಿಗಳನ್ನು ವಿಕ್ಟೊರಿಯಾ, ಬೌರಿಂಗ್ & ರಾಜೀವ್ ಗಾಂಧಿ ಆಸ್ಪತ್ರೆಗೆ ರವಾನಿಸಲು ಆಂಬುಲನ್ಸ್ ವ್ಯವಸ್ಥೆ ಮಾಡಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ ಚಿಕಿತ್ಸೆಗೆ 20 ಭಾರಿ ಗಾತ್ರದ ಆಕ್ಸಿಜನ್ ಸಿಲಿಂಡರ್ ಗಳನ್ನು ಕಿಮ್ಸ್ ಗೆ ಕಳುಹಿಸಲಾಗಿದೆ ಎಂದು ವಿವರಿಸಿದ್ದಾರೆ.

ಇನ್ನು ಕಿಮ್ಸ್ ಆಸ್ಪತೆಯಿಂದ 14 ರೋಗಿಗಳನ್ನು ವಿಕ್ಟೊರಿಯಾ ಆಸ್ಪತ್ರೆಗೆ ಮತ್ತು 15 ರೋಗಿಗಳನ್ನು ಬೌರಿಂಗ್ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಸುರಕ್ಷಿತವಾಗಿ ರವಾನಿಸಲಾಗಿದೆ. ತುರ್ತು ಪರಿಸ್ಥಿತಿಗಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಬೆಡ್ ಗಳನ್ನು ಸಿದ್ಧ ಪಡಿದಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ