ಬೆಂಗಳೂರು: ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5172 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 129287 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು 98 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2420 ಕ್ಕೆ (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.
ಈ ನಡುವೆ, ಇಂದು ರಾಜ್ಯದಲ್ಲಿ 3860 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ53648 ಕ್ಕೇರಿದಂತಾಗಿದೆ. ಇನ್ನು 73219 ಸಕ್ರಿಯ ಪ್ರಕರಣಗಳಿವೆ.
ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1872 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 57416 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 27 ಮಂದಿ ಬಲಿಯಾಗಿದ್ದಾರೆ.
ಇಂದಿನ 01/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMMhttps://t.co/NMdKjMZLSp pic.twitter.com/dZIyHF6V02
— K'taka Health Dept (@DHFWKA) August 1, 2020
ಭಾರತ ಸೇರಿದಂತೆ ವಿಶ್ವದ ನಾನಾ ರಾಷ್ಟ್ರಗಳ ಕೊರೊನಾ ಸೋಂಕಿತರ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail