NEWSನಮ್ಮರಾಜ್ಯರಾಜಕೀಯಶಿಕ್ಷಣ-

ಕಂಗೆಟ್ಟ ಶಿಕ್ಷಕರಿಗೆ ಸ್ಪಂದಿಸದಿದ್ದರೆ ಪರಿಣಾಮ ಎದುರಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಎಚ್‌ಡಿಕೆ ಕಡಕ್‌ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ  ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು. ಇಲ್ಲದಿದ್ದರೆ ಮುಂದೆ ಜರುಗುವ ಅನಾಹುತಗಳನ್ನು ಎದುರಿಸಲು ರಾಜ್ಯ ಸರ್ಕಾರ ಸಜ್ಜಾಗಬೇಕು  ಎಂದು ಕಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ.

ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ ಶಿಕ್ಷಕರಿಗೆ ಕಳೆದ ಏಪ್ರಿಲ್ ನಿಂದ ವೇತನ ಸಿಗದೇ ದೈನಂದಿನ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರ ನೋವು ಇದಕ್ಕಿಂತ ಭಿನ್ನವಾಗಿಲ್ಲ. ಸರ್ಕಾರ ಈ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಅತಂತ್ರಕ್ಕೆ ಸಿಲುಕಿರುವ ಶಿಕ್ಷಕರ ನೆರವಿಗೆ ತಕ್ಷಣ ಧಾವಿಸಬೇಕು ಎಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ