NEWSಕೃಷಿದೇಶ-ವಿದೇಶ

ಡಿ.5ರವರೆಗೂ ಬುರೇವಿ ಚಂಡಮಾರುತದ ಅಬ್ಬರ: ಹಲವೆಡೆ ಭಾರಿ ಮಳೆ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ನಿವಾರ್ ಚಂಡಮಾರುತ ದಕ್ಷಿಣ ಭಾರತವನ್ನು ಅಪ್ಪಳಿಸಿತ್ತು. ಇದೀಗ ಇಂದಿನಿಂದ ಬುರೇವಿ ಚಂಡಮಾರುತದ ಅಬ್ಬರ ಶುರುವಾಗಿದೆ.

ಇಂದು ಕೇರಳಕ್ಕೆ ಬುರೇವಿ ಚಂಡಮಾರುತದ ಆಗಮನವಾಗಿದ್ದು, ಇದರ ಪರಿಣಾಮವಾಗಿ ಕೇರಳದ ನೆರೆಯ ರಾಜ್ಯಗಳಾದ ತಮಿಳುನಾಡು ಕರ್ನಾಟಕದಲ್ಲಿ ಕೂಡ ನಾಲ್ಕೈದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದರ ಬೆನ್ನಲ್ಲೇ ಬೆಂಗಳೂರು ಸೇರಿ ಕರ್ನಾಟಕದ ಅನೇಕ ಭಾಗಗಳಲ್ಲಿ ಗುರುವಾರ ಬೆಳಗ್ಗೆಯಿಂದ ತುಂತುರು ಸಹಿತ ಭಾರಿ ಮಳೆ ಶುರುವಾಗಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನಗಳು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಶಿವಮೊಗ್ಗ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಡಿ. 5ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೇರಳದಲ್ಲಿ ಮೂರು ದಿನಗಳು ಮಳೆಯ ಆರ್ಭಟ ತೀವ್ರಗೊಳ್ಳಲಿದೆ. ಹೀಗಾಗಿ, ರೆಡ್ ಅಲರ್ಟ್​ ಘೋಷಿಸಲಾಗಿದೆ. ಬುರೇವಿ ಚಂಡಮಾರುತವು ಇಂದು ಮಧ್ಯಾಹ್ನ 70-80 ಕಿ.ಮೀ. ವೇಗದಲ್ಲಿ ಕೇರಳಕ್ಕೆ ಆಗಮಿಸಿದೆ. ನಾಳೆ ತಮಿಳುನಾಡು ಕರಾವಳಿಯನ್ನು ದಾಟಿ ಹೋಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡಿನ ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಸಿವಗಂಗೈ ಮತ್ತು ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಭಾಗದಲ್ಲಿ ಡಿಸೆಂಬರ್ 5ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪರಿಣಾಮ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಮೇಲೂ ಆಗಲಿದೆ. ಡಿಸೆಂಬರ್ 5ರವರೆಗೆ ಬುರೇವಿ ಚಂಡಮಾರುತದಿಂದ ಕಡಲು ಹೆಚ್ಚು ಅಪಾಯಕಾರಿ ಆಗಿರುವುದರಿಂದ ಯಾರೂ ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ