Vijayapatha – ವಿಜಯಪಥ
Friday, November 1, 2024
CrimeNEWSದೇಶ-ವಿದೇಶರಾಜಕೀಯ

ದಿವಂಗತ ಜಯಲಲಿತಾ ಪರಮಾಪ್ತೆ ಶಶಿಕಲಾರ ಜೈಲುವಾಸ ಅಂತ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುವಾಸ ಅನುಭವಿಸಿದ ನಂತರ ಕೊನೆಗೂ ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು ಬಿಡುಗಡೆಗೊಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶಶಿಕಲಾ ಚಿಕಿತ್ಸೆ ಪಡೆಯುತ್ತಿರುವ ಟ್ರಾಮಾ ಕೇಂದ್ರದ ಒಳಗೆ ಅವರ ವಕೀಲರೊಂದಿಗೆ ಜೈಲು ಅಧಿಕಾರಿ ಹೋಗಿ ಸಹಿ ಪಡೆಯುವ ಮೂಲಕ ಅಧಿಕೃತವಾಗಿ ಬಿಡುಗಡೆ ಮಾಡಿದರು.

ಈ ಮೂಲಕ ಬುಧವಾರ ಬೆಳಗ್ಗೆ 11 ಗಂಟೆ ಹೊತ್ತಿಗೆ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಗಿದ್ದು, ಆಸ್ಪತ್ರೆಯಿಂದಲೇ ಅವರು ಮನೆಗೆ ತೆರಳುವರು ಎಂದು ಹೇಳಲಾಗಿದೆ.

ಇನ್ನು ಶಶಿಕಲಾ ಅವರನ್ನು ಬಿಡುಗಡೆ ಮಾಡುವ ಹೊತ್ತಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲಾ ಕೋವಿಡ್ ಶಿಷ್ಟಾಚಾರಗಳನ್ನು ಪೂರ್ಣಗೊಳಿಸಲಾಗಿದೆ. ಅವರ ಆರೋಗ್ಯ ಈಗ ಬಹಳಷ್ಟು ಸುಧಾರಿಸಿದ್ದು ಹೃದಯ ಬಡಿತ ಪ್ರತಿ ನಿಮಿಷಕ್ಕೆ 76 ಬಾರಿ ಮತ್ತು ರಕ್ತದೊತ್ತಡ 166/86 ಎಂಎಂಎಚ್‌ಜಿ ಇದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ದೃಢಪಡಿಸಿದೆ.

ಆಸ್ಪತ್ರೆಯಲ್ಲಿ ಇಂದು ಶಶಿಕಲಾ ಅವರ ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು ಎರಡನೇ ಪರೀಕ್ಷೆ ಇದೇ 30ರಂದು ನಡೆಯಲಿದೆ. ಎರಡೂ ಪರೀಕ್ಷೆಗಳಲ್ಲಿ ನೆಗೆಟಿವ್ ಬಂದರೆ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದಾಗಿದೆ.

ತಮಿಳುನಾಡಿನಲ್ಲಿ ಚಿನ್ನಮ್ಮ ಎಂದೇ ಖ್ಯಾತರಾಗಿರುವ ಶಶಿಕಲಾ ಅವರನ್ನು ಬರಮಾಡಿಕೊಳ್ಳಲು ಅವರ ಬಂಧುಗಳು, ಎಎಂಎಂಕೆ ಪಕ್ಷದ ಕಾರ್ಯಕರ್ತರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಇವರ ಬಿಡುಗಡೆಯಿಂದ ತಮುಳುನಾಡು ರಾಜ್ಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದೇ ಎಂಬ ಕುತೂಹಲ ಅಲವು ರಾಜಕೀಯ ನಾಯಕರಲ್ಲಿ ಮನೆ ಮಾಡಿದೆ.

ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಪರಮಾಪ್ತೆಯಾಗಿದ್ದ ಶಶಿಕಲಾ ಎಐಎಡಿಎಂಕೆಯಲ್ಲಿ ಪ್ರಮುಖ ಸ್ಥಾನದ ಆಕಾಂಕ್ಷೆಯಿಟ್ಟುಕೊಂಡಿದ್ದವರು, ಆದರೆ ಜಯಲಲಿತಾ ಅವರ ನಿಧನ ನಂತರ ನಡೆದ ತಮಿಳುನಾಡಿನ ರಾಜಕೀಯ ವಿದ್ಯಮಾನಗಳಿಂದ ಎಐಎಡಿಎಂಕೆಯಿಂದ ಉಚ್ಛಾಟಿಸಲ್ಪಟ್ಟರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ