NEWSರಾಜಕೀಯ

ನನ್ನ, ಸಿದ್ದರಾಮಯ್ಯ ಬಗ್ಗೆ ಮಾತಾಡಿದವರಿಗೆ ಪ್ರಮೋಷನ್ ಸಿಗಲಿ: ಡಿಕೆಶಿ ಚಾಟಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನನ್ನ ಹಾಗೂ ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದರೆ ಮಾಧ್ಯಮದಲ್ಲಿ ಬೆಲೆ ಇದೆ. ನಮ್ಮ ಬಗ್ಗೆ ಮಾತಾಡಿದರೆ ಅವರಿಗೆ ಪ್ರಮೋಷನ್ ಸಿಗುತ್ತೆ ಮತ್ತು ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ಸಿಗುತ್ತದೆ ಹಾಗಾಗಿ ಅವರು ನಮ್ಮ ಬಗ್ಗೆ ಮಾತನಾಡುತ್ತಾರೆ ಅವರಿಗೆ ಒಳ್ಳೆಯದಾಗಲಿ ಬಿಡಿ ಎಂದು ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮಶೇಖರ್ ಹೇಳಿಕೆಯೊಂದಕ್ಕೆ ಸಂಬಂಧಿಸಿದ ಸುದ್ದಿಗಾರರ ಪ್ರಶ್ನೆಗೆ ಇಂದು ಪ್ರತಿಕ್ರಿಯಿಸಿದ ಶಿವಕುಮಾರ್, ಬಹಳ ಸಂತೋಷ, ಇಷ್ಟು ಬೇಗ ಸಂತೋಷವಾದ ಸುದ್ದಿ ಹೇಳಿದ್ದಾರೆ. ಸೋಮಶೇಖರ್, ಸಾಮ್ರಾಟ್ ಅಶೋಕ್, ಸಿ ಟಿ ರವಿ, ಸರ್ವಿಸ್ ಪ್ರವೈಡರ್ ಅಶ್ವಥ್ ಎಲ್ಲಾ ಮಾತನಾಡುತ್ತ ಇದಾರಲ್ಲ. ಮಾತನಾಡಲಿ ಏನೇನಿದೆಯೋ ಹುಡುಕಾಡಲಿ ಎಂದು ಬಿಜೆಪಿ ನಾಯಕರ ವಿರುದ್ಧ ಚಾಟಿ ಬೀಸಿದರು.

ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ನನ್ನ ಬಗ್ಗೆ ಮಾತನಾಡಿದವರಿಗೆ ಬೇಗ ಒಳ್ಳೆಯ ಪ್ರಮೋಷನ್ ಸಿಗಲಿ ಎಂದು ಹೇಳುವ ಮೂಲಕ ಸಚಿವ ಸೋಮಶೇಖರ್ ಅವರಿಗೂ ಶಿವಕುಮಾರ್ ತಿರುಗೇಟು ನೀಡಿದರು.

ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಈಗ ಅಪ್ರಸ್ತುತ. ನಾವೆಲ್ಲ ಶಾಸಕಾಂಗ ಪಕ್ಷದ ನಾಯಕರ ಜತೆ ಇದ್ದೇವೆ. ಮುಂದಿನ ಚುನಾವಣೆಯಲ್ಲಿ ಬಹುಮತ ಬರಲಿ, ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿ. ಆ ವೇಳೆ ಹೈಕಮಾಂಡ್ ಸಿಎಂ ಯಾರೆಂದು ನಿರ್ಧರಿಸುತ್ತದೆ ಎಂದು ಹೇಳಿದರು.

ಇನ್ನು ಕೋಳಿವಾಡ ಶಿಸ್ತುಪಾಲನೆ ಬಗ್ಗೆ ಹೇಳಿದ್ದಾರೆ. ನಾನು ಕೊಟ್ಟ ಜವಾಬ್ದಾರಿಯನ್ನು ಅವರು ನಿರ್ವಹಿಸುತ್ತಿದ್ದಾರೆ. ನಾನು ಸೇರಿ ಎಲ್ಲರೂ ಸಿದ್ದರಾಮಯ್ಯ ಜತೆ ಇದ್ದೇವೆ. ಅವರು ನಮ್ಮ ಶಾಸಕಾಂಗ ಪಕ್ಷದ ನಾಯಕರು ಎಂದು ಹೇಳಿ ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದರು.

ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಎಸ್.ಟಿ.ಸೋಮಶೇಖರ್
ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಮುನಿರತ್ನ ಅವರನ್ನು ಸೋಲಿಸಲು ಸಾಧ್ಯವೇ ಇಲ್ಲ. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಅವರೇ ಬೆಲೆ ಕೊಡುವುದಿಲ್ಲ. ನಾವು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದೇವು. ನಮ್ಮನ್ನು ಪಕ್ಷ ಬಿಡಿಸಿದವರು ಯಾರು? ಶೇ.99 ರಷ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದು, ಹೊರಗಡೆಯಿಂದ ಕರೆದುಕೊಂಡು ಬಂದು ಚುನಾವಣೆ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...