NEWSನಮ್ಮರಾಜ್ಯರಾಜಕೀಯ

ಜಿಲ್ಲಾಧಿಕಾರಿಗಳ ಕೈಯಲ್ಲಿ ಲಾಕ್‌ಡೌನ್‌ ಕೀ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವುದರಿಂದ ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಕೊರೊನಾ ಏರುಗತಿಯಲ್ಲಿ ಸಾಗುತ್ತಿದೆ ಎಂಬುದನ್ನು ಆಧರಿಸಿ ನೀವೆ ಅಂತಿಮ ನಿರ್ಧಾರ ತೆಗೆದುಕೊಳ್ಳಿ ಎಂದು ಆಯಾಯ ಜಿಲ್ಲಾಧಿಕಾರಿಗಳಿಗೆ ಸಿಎಂ ಅಧಿಕಾರ ನೀಡಿದ್ದಾರೆ.

ಮಂಗಳವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ನಾನು ಯಾರಿಗೂ ಲಾಕ್‌ಡೌನ್‌ ಮಾಡಿ ಎಂದು ಹೇಳಲ್ಲ, ಏಕೆಂದರೆ ಲಾಕ್‌ಡೌನ್‌ನಿಂದ ಯಾವುದೇ ಪ್ರಯೋಜವಾಗುವುದಿಲ್ಲ, ಹೀಗಾಗಿ ನಿಮ್ಮ ವಿವೇಚನೆಗೆ ಬಿಟ್ಟಿದ್ದು ಅಲ್ಲಿ ಪರಿಸ್ಥಿತಿ ಆಧರಿಸಿ ನಿವೇ ಕ್ರಮ ಜರುಗಿಸಿ ಎಂದು ಡಿಸಿಗಳಿಗೆ ಸೂಚನೆ ನೀಡಿದ್ದಾರೆ.

ಲಾಕ್‌ಡೌನ್‌ ಬೇಕೆ ಬೇಡವೇ ಎಂಬ ಬಗ್ಗೆ ಚರ್ಚಿಸಿದ ಬಳಿಕ ಜಿಲ್ಲಾಧಿಕಾರಿಗಳಿಗೆ ಲಾಕ್‌ಡೌನ್‌ ಮಾಡುವ ಅಧಿಕಾರಿ ನೀಡಿದ್ದು, ಮುಂದಿನ ನಿರ್ಧಾರ ತೆಗೆದುಕೊಳ್ಳುವ  ಅಧಿಕಾರವನ್ನು ನಿಮಗೆ ನೀಡುತ್ತಿದ್ದು ನೀವೆ ಅಂತಿಮ ಕ್ರಮ ಜರುಗಿಸಿ ಎಂದು ತಿಳಿಸಿದ್ದಾರೆ.

ಹೀಗಾಗಿ ತಮ್ಮ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ತೀವ್ರತೆಯನ್ನು ಆಧರಿಸಿ ಡಿಸಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು. ಜತೆಗೆ ಜಿಲ್ಲೆಯ ಸಮಸ್ತ ಜನರ ಜೀವ ಜೀವನವನ್ನು ಗಮನದಲ್ಲಿಟ್ಟುಕೊಂಡು  ಕ್ರಮ ಜರುಗಿಸಲಿದ್ದಾರೆ. ಅದಕ್ಕೆ ಸಿಎಂ ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದಾರೆ.

Leave a Reply

error: Content is protected !!
LATEST
ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ