Breaking NewsNEWSದೇಶ-ವಿದೇಶ

ಇಂದಿನಿಂದ ಟ್ರೈನ್‌ ಟಿಕೆಟ್‌ ಬುಕ್ಕಿಂಗ್‌ ಶುರು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ ಎಂದು  ಭಾರತೀಯ ರೈಲ್ವೆ ಇಲಾಖೆ ಮಹತ್ವ ಆದೇಶ ಹೊರಡಿಸಿದ್ದು, ಈ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.

ರೈಲುಗಳ ಟಿಕೆಟ್ ಬುಕಿಂಗ್ ಇಂದು (ಮೇ 11) ಸಂಜೆ 4 ಗಂಟೆಗೆ ಪ್ರಾರಂಭವಾಗಲಿದೆ.  ಐಆರ್‌ಸಿಟಿಸಿ ವೆಬ್‍ಸೈಟ್‍ನಲ್ಲಿ ಮಾತ್ರ ಟಿಕೆಟ್ ಲಭ್ಯವಿರಲಿದೆ. ರೈಲ್ವೆ ನಿಲ್ದಾಣಗಳ ಕೌಂಟರ್ ಗಳಲ್ಲಿ ಟಿಕೆಟ್ ಸಿಗುವುದಿಲ್ಲ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರೈಲು ಪ್ರಯಾಣಿಕರು ಮಾಸ್ಕ್ ಹಾಕಿಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡುವುದು ಕಡ್ಡಾಯವಾಗಿದೆ. ಕೊರೊನಾ ಸೋಂಕಿನ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲು ಹತ್ತಲು ಅವಕಾಶ. ರೈಲು ವೇಳಾಪಟ್ಟಿ ಸೇರಿದಂತೆ ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದೆ.

ಪ್ರಯಾಣಿಕರ ರೈಲುಗಳನ್ನು ಮೇ 12ರಿಂದ ಹಂತ ಹಂತವಾಗಿ ಪ್ರಾರಂಭಿಸಲಿದ್ದು,  ಆರಂಭದಲ್ಲಿ 15 ಜೋಡಿ ರೈಲುಗಳು ಓಡಾಡಲಿವೆ. ಆ ವಿಶೇಷ ರೈಲುಗಳು ನ್ಯೂಡೆಲ್ಲಿ ನಿಲ್ದಾಣದಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮುಮ ರಾವಿಗೆ ಸಂಪರ್ಕ ಕಲ್ಪಿಸಲಿವೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTCಯ 4ನಿಗಮಗಳ ಸಾರಿಗೆ ನೌಕರರಿಗೆ ಶೇ.45ರಷ್ಟು ವೇತನ ಹೆಚ್ಚಳಕ್ಕೆ ವೇದಿಕೆ ಆಗ್ರಹ NWKRTC: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲಕನ ಕಾಲು ಮುರಿತ ಸಾರಿಗೆ ನೌಕರರು ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೆ ಕೆಲಸದಿಂದ ವಜಾ: ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ಜು.22ರಂದು ಬೆಂವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ- ರಾಷ್ಟ್ರೀಯ ಸಮ್ಮೇಳನ ಕಿರಿಯ ವಕೀಲರಿಗೆ ಗೌರವಾನ್ವಿತ ಸಂಬಳ ಕೊಡಿ: ಹಿರಿಯ ವಕೀಲರಿಗೆ ಸುಪ್ರೀಂ ಕೋರ್ಟ್‌ ಸಿಜೆ ಚಂದ್ರಚೂಡ್ ಕಿವಿ ಮಾತು ಬದಲಿ ಜಾಗದಲ್ಲಿ ಮನೆ ಕಟ್ಟಿಕೊಡ್ತೇವೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ 24 ಗಂಟೆ ಉಚಿತ ವಿದ್ಯುತ್‌, ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ, ಗುಣಮಟ್ಟದ ಶಿಕ್ಷಣ, ಯುವಕರಿಗೆ ಉದ್ಯೋಗ ಮಹಿಳೆಯರಿಗೆ ತಿ... ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೆ.ವೆಂಕಟೇಶ್ ಭೇಟಿ: ಮೃತ ಕುಟುಂಬಕ್ಕೆ ಸಾಂತ್ವನ ಪರಿಹಾರ ಧನ ವಿತರಣೆ ಗೊರೂರು ಜಲಾಶಯದಿಂದ 25ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ: ಇಂಜಿನಿಯರ್ ಆನಂದ್ ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಲಾಭ ಪಡೆಯಿರಿ: ತುಷಾರ್  ಗಿರಿನಾಥ್