ವಿಜಯಪಥ ಸಿನಿಸುದ್ದಿ
ಬೆಂಗಳೂರು: ಪೊಗರು ಚಲನಚಿತ್ರ ತಂಡ ಕ್ಷಮೆಯಾಚಿಸಿದರೆ ಸಾಲದು. ಬ್ರಾಹ್ಮಣರಿಗೆ ಅಪಮಾನದ ದೃಶ್ಯಗಳನ್ನು ತೆಗೆದುಹಾಕುವಂತೆ ಬ್ರಾಹ್ಮಣ ಸಮುದಾಯ ಒತ್ತಾಯಿಸಿದೆ.
ಪೊಗರು ಚಿತ್ರದಲ್ಲಿ ಬ್ರಾಹ್ಮಣರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ಬ್ರಾಹ್ಮಣ ಸಮುದಾಯ ಇಂದು ಚೇಂಬರ್ ಆಫ್ ಕಾಮರ್ಸ್ ಮುಂದೆ ಪ್ರತಿಭಟನೆ ನಡೆಸಿತು. ಈ ವೇಳೆ ನಿರ್ದೇಶಕ ನಂದಕಿಶೋರ್ ಕ್ಷಮೆಯಾಚಿಸುವುದಲ್ಲ. ಅವಮಾನಕರ ದೃಶ್ಯಗಳನ್ನು ನಾಳೆ ಒಳಗೆ ತೆಗೆದುಹಾಕ ಬೇಕು ಎಂದು ಗಡುವು ನೀಡಿತು.
ಅಖಿಲ ಕರ್ನಾಟಕ ಮಾಧ್ವ ಮಹಾಸಭಾ ಮತ್ತು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಪೊಗರು ಚಿತ್ರರಂಗದ ವಿರುದ್ಧ ಕರ್ನಾಟಕ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಗೆ ದೂರು ನೀಡಿದ್ದು, ದೃಶ್ಯಕ್ಕೆ ಕತ್ತರಿ ಹಾಕಲೇಬೇಕು ಆಗ್ರಹಿಸಿದೆ.
ಪೋಗರ್ ಸಿನಿಮಾ ವಿರುದ್ಧ ಇಂದು ರಾಜ್ಯದಲ್ಲಿ ಅನೇಕ ಪ್ರತಿಭಟನೆಗಳು ನಡೆದಿದ್ದು, ಮೈಸೂರು, ಕಲಬುರಗಿಯಲ್ಲಿ ಪ್ರತಿಭಟನೆ ಮಾಡಿದರೆ, ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಬ್ರಾಹ್ಮಣ ಸಮುದಾಯದವರು ಒತ್ತಾಯ ಮಾಡಿದ್ದಾರೆ.
ಪೊಗರು ನಿರ್ಮಾಪಕ ಬಿ.ಕೆ.ಗಂಗಾಧರ್ ಪರ ನಿರ್ಮಾಪಕ ಸೂರಪ್ಪ ಬಾಬು ಮಾತನಾಡಿ, ಪೊಗರು ಸಿನಿಮಾ ಸೆನ್ಸಾರ್ ಆಗಿದೆ. ಈ ಸಮಸ್ಯೆಯನ್ನು ಕಾನೂನುಬದ್ಧವಾಗಿ ಪರಿಹರಿಸಬೇಕು. ಒಮ್ಮೆ ಸೆನ್ಸಾರ್ ಆದಮೇಲೆ ಅದನ್ನು ಮತ್ತೆ ಸೆನ್ಸಾರ್ ಮಂಡಳಿ ಮೂಲಕವೇ ಮತ್ತೆ ಪರಿಹರಿಸಬೇಕು. ನಾವು ಈಗಾಗಲೇ ಸೆನ್ಸಾರ್ ಮಂಡಳಿಗೆ ಮನವಿ ಮಾಡಿದ್ದೇವೆ. ಆಕ್ಷೇಪಾರ್ಹ ತುಣುಕನ್ನು ತೆಗೆದುಹಾಕಲು 48 ಗಂಟೆಗಳವರೆಗೆ ಅವಕಾಶ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.