ಹಾಸನ: ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ ಸಾವು ಸಂಭವಿಸಿದೆ. ಸಕಲೇಶಪುರ ತಾಲೂಕಿನ 75 ವರ್ಷದ ಮಹಿಳೆ ಕಳೆದ ರಾತ್ರಿ 2:50ರ ಕೊನೆ ಉಸಿರೆಳೆದಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕರೊನಾ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ
ತೀವ್ರ ಉಸಿರಾಟದ ತೊಂದರೆ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿದ್ದ ಸೊಂಕಿತರನ್ನು ಹಾಸನದ ಕೋವಿಡ್ ಆಸ್ಪತ್ರೆಯ ಐ.ಸಿ.ಯುವಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸತೀಶ್ ತಿಳಿಸಿದ್ದಾರೆ.