ನ್ಯೂಡೆಲ್ಲಿ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.
ಆ.22ರಂದು ನಿಧನರಾದ ಉತ್ತರಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜ ಹೊದಿಸಿ ನಡ್ಡಾ ಅವರು ಅಪಮಾನ ಮಾಡಿದ್ದರು.
ಈ ಕುರಿತು ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಪರಾಶರ್ ಅವರು ಮುಝಫರ್‌ಪುರ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ʻಬಿಜೆಪಿ ಇದನ್ನು ಉದ್ದೇಶಪೂರ್ವಕವಾಗಿ ಮಾಡಿದೆ. ನಡ್ಡಾ ಕೃತ್ಯವು ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನʼ ಎಂದು ದೂರುದಾರರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದ ಕೆಲವು ಚಿತ್ರಗಳನ್ನು ಸಹ ದೂರಿನೊಂದಿಗೆ ಸಲ್ಲಿಸಿದ್ದಾರೆ. ನ್ಯಾಯಾಲಯವು ಪ್ರಕರಣದ ಬಗ್ಗೆ ಗಮನಹರಿಸಬೇಕಿದ್ದು, ವಿಚಾರಣೆಗೆ ದಿನಾಂಕವನ್ನು ಇನ್ನಷ್ಟೇ ನಿಗದಿಪಡಿಸಬೇಕಿದೆ.
ರಾಷ್ಟ್ರಧ್ವಜದ ‘ಧ್ವಜ ಸಂಹಿತೆ’ ಹೇಳುವುದೇನು?
* ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು
* ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜದ ಮೇಲೆ ಇಡಬಾರದು
* ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕೆ ಸರಿಸಮಾನವಾಗಿ ಇಡಬಾರದು