NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈ ಅವರೇ ನಮ್ಮ ನಾಯಕರು: ಪುನರುಚ್ಚರಿಸಿದ ಸಚಿವ ಎಸ್‌ಟಿಎಸ್‌

ವಿಜಯಪಥ ಸಮಗ್ರ ಸುದ್ದಿ

ಪೊನ್ನಂಪೇಟೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅವರ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಮತ್ತೊಮ್ಮೆ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯವರು ನುಡಿದಂತೆ ನಡೆಯುವವರು. ಅವರು ಮಾತು ಕೊಟ್ಟಂತೆ ನಮ್ಮೆಲ್ಲರನ್ನು ಸಚಿವರನ್ನಾಗಿ ಮಾಡಿದ್ದಾರೆ. ಅಲ್ಲದೆ ಸೋತವರಿಗೂ ಕೂಡ ಮಂತ್ರಿಗಿರಿ ಕೊಟ್ಟಿದ್ದಾರೆ. ಇನ್ನೂ ಸಂಪುಟ ವಿಸ್ತರಣೆಯಾಗಲಿ, ಪುನಾರಚನೆಯಾಗಲೀ ಆಗಿಲ್ಲ ಎಂದರು.

ಸಂಪುಟ ವಿಸ್ತರಣೆ ಮಾಡುವ ವೇಳೆ ಯಾರಿಗೆ ಸ್ಥಾನ ಕೊಡಬೇಕು..? ಕೊಡಬಾರದು..? ಎಂಬ ಬಗ್ಗೆ ಸಿಎಂ ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದ ಅವರು, ಈಗಲೂ ಸಹ ಉಳಿದವರನ್ನು ಕೈಬಿಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ಪ್ರಶ್ನೆಯೊಂದಕ್ಕೆ ಸೂಕ್ಷ್ಮವಾಗಿಯೇ ಉತ್ತರಿಸಿದರು.

ಇನ್ನು ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ
ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ರಹಸ್ಯ ವಿಡಿಯೋ ಕಾರಣ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪ ಸತ್ಯಕ್ಕೆ ದೂರ. ಆ ರೀತಿಯ ವಿಡಿಯೋ ಇದ್ದರೆ ಹೊರಗೆ ತನ್ನಿ ಎಂದರು. ಅಲ್ಲದೆ ಸಂತೋಷ್ ಒಳ್ಳೆಯ ಹುಡುಗ. ರಾಜಕೀಯವಾಗಿ ಇನ್ನೂ ಮುಂದೆ ಬರಬೇಕಿದೆ. ಆದರೆ ಮಾನಸಿಕ ತೊಂದರೆಯಿಂದ ಈರೀತಿ ಮಾಡಿಕೊಂಡಿರಬಹುದು ಎಂದು ಹೇಳಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ