NEWSನಮ್ಮಜಿಲ್ಲೆರಾಜಕೀಯ

ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳು ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹುಡ್ ಸ್ಟ್ರೀಟ್, ಟಾಟಾ ಲೇನ್ , ಕ್ಯಾಪಿಟಲ್ ಹೋಟೆಲ್-ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನಲ್ಲಿ 37 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲಿ ರಸ್ತೆ ಅಭಿವೃದ್ಧಿ, ಕೋವಿಡ್ ಆಸ್ಪತ್ರೆಗಳಿಗೆ ನೆರವು, ಐಟಿ-ಯೋಜನೆಗಳು, ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿಗಳು ಸೇರಿವೆ. ಇದರ ಅಂದಾಜು ವೆಚ್ಚ 930 ಕೋಟಿ ರೂ.ಗಳು. ಈ ವರೆಗೆ 4 ಕಾಮಗಾರಿಗಳು ಪೂರ್ಣಗೊಂಡಿವೆ. 29 ಕಾಮಗಾರಿಗಳು ಪ್ರಗತಿಯಲ್ಲಿವೆ. 4 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ವರೆಗೆ 103 ಕೋಟಿ ರೂ. ವೆಚ್ಚವಾಗಿದೆ ಎಂದು ವಿವರಿಸಿದರು.

ಈ ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿಯನ್ನು ಖಾತರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು