ಬೆಂಗಳೂರು: ಬಾಗಲಕೋಟೆಯ ಬಾದಾಮಿಯಲ್ಲಿ ಇಂದು ಒಂದೇ ದಿನ 13 ಹೊಸ ಕೊರೊನಾ ಪಾಲಿಸಿಟಿವ್ ಸೇರಿ ರಾಜ್ಯದಲ್ಲಿ ಹೊಸದಾಗಿ 20 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ.
ಇವುಗಳಲ್ಲಿ 29 ಜನರು ಮೃತಪಟ್ಟಿದ್ದು, 345 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಎರಡು, ದಕ್ಷಿಣ ಕನ್ನಡಲ್ಲಿ ಮೂರು ಮತ್ತು ವಿಜಯಪುರ-ಕಲಬುರಗಿಯಲ್ಲಿಒಂದೊಂದು ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 693 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 345 ಮಂದಿ ಗುಣಮುಖರಾಗಿದ್ದಾರೆ. ಇನ್ನು 319 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 29 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಯಾವುದೇ ಪಾಸಿಟಿವ್ಪ್ರಕರಣ ವರದಿಯಾಗಿಲ್ಲ.
ದೇಶದಲ್ಲಿ 49,436 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 49,436 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,695 ಮಂದಿ ಮೃತಪಟ್ಟಿದ್ದಾರೆ. 14,183 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 37,30,023 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,58,394 ಜನರು ಮೃತಪಟ್ಟಿದ್ದಾರೆ. 12,45,723 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail